ಬೆಂಗಳೂರು: ಸ್ಯಾಂಡಲ್ವುಡ್ ನಟಿ ಆಶಿಕಾ ರಂಗನಾಥ್ ತೋಟದಲ್ಲಿ ಕೆಲಸ ಮಾಡುತ್ತಾ ಕಾಲ ಕಳೆಯುತ್ತಿರುವ ಫೋಟೋಗಳು ಸಖತ್ ವೈರಲ್ ಆಗುತ್ತಿವೆ.
Advertisement
ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದ ಚಂದನವನದ ನಟಿ ಆಶಿಕಾ ರಂಗನಾಥ್ ಈಗ ತೋಟ ಮನೆಯಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಜೊತೆಗೆ ತೋಟದಲ್ಲಿ ಕೆಲಸ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ. ಆಶಿಕಾ ಅವರ ಫೋಟೋಗಳನ್ನು ನೋಡಿದ ನೆಟ್ಟಿಗರು ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ.
Advertisement
Advertisement
ಲಾಕ್ಡೌನ್ ಇರುವುದರಿಂದ ತಮ್ಮ ಫಾರ್ಮ್ಹೌಸ್ನಲ್ಲಿ ಕುಟಂಬಸ್ಥರ ಜೊತೆಗೆ ತೋಟದಲ್ಲಿ ಕೆಲಸ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ. ಮಾವಿನ ತೋಟದಲ್ಲಿ ಕೆಲಸ ಮಾಡುತ್ತಾ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ತೋಟದ ಮನೆಯ ಫೋಟೋ ಹಾಗೂ ವೀಡಿಯೋಗಳನ್ನು ಶೇರ್ ಮಾಡಿದ್ದಾರೆ. ಆಶಿಕಾ ಮಾವಿನಹಣ್ಣು, ತರಕಾರಿಗಳನ್ನು ಕೊಯ್ಯುದು ಬಿದಿರಿನ ಬುಟ್ಟಿಯಲ್ಲಿ ಹೊತ್ತು ತರುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
Advertisement