ಕಾರವಾರ: ಕಳೆದ ಎರಡು ದಿನದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರಿಸಿದ ತೌಕ್ತೆ ಚಂಡಮಾರುತದಿಂದಾಗಿ ಜಿಲ್ಲೆಯಲ್ಲಿ ದೊಡ್ಡ ನಷ್ಟ ಸಂಭವಿಸಿದೆ.
Advertisement
ಚಂಡಮಾರುತದ ಅಬ್ಬರಕ್ಕೆ ಕರಾವಳಿಯ 43 ಗ್ರಾಮಗಳಲ್ಲಿ ಹಾನಿ ಸಂಭವಿಸಿದ್ದು, 153 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಮತ್ತು 22 ಮನೆ ತೀವ್ರ ಹಾಗೂ ಒಂದು ಮನೆ ಸಂಪೂರ್ಣ ನಾಶವಾಗಿದೆ. ತೌಕ್ತೆ ಅಬ್ಬರಕ್ಕೆ ಭಟ್ಕಳದ ಮೀನುಗಾರ ಮೃತಪಟ್ಟಿದ್ದಾನೆ.
Advertisement
Advertisement
ಕರಾವಳಿ ಭಾಗದಲ್ಲಿ ಬಹುತೇಕ ಮೀನುಗಾರರು ನಷ್ಟ ಅನುಭವಿಸಿದ್ದು 83 ಬೋಟುಗಳು ಹಾನಿಯಾಗೊಳಗಾಗಿದ್ದು, ಮೂರು ಬೋಟುಗಳು ಸಂಪೂರ್ಣ ಧ್ವಂಸಗೊಂಡಿದೆ. ಕಡಲ ಅಲೆಯ ಹೊಡೆತಕ್ಕೆ 37 ಬಲೆಗಳು ಹಾನಿಯಾಗಿದ್ದರೆ, 8 ಬಲೆಗಳು ಸಂಪೂರ್ಣ ನಾಶವಾಗಿದೆ. ಇನ್ನು ಮಳೆ ಹಾಗೂ ಗಾಳಿ ಅಬ್ಬರಕ್ಕೆ ಜಿಲ್ಲೆಯಾದ್ಯಂತ 530 ವಿದ್ಯುತ್ ಕಂಬಗಳು ಧರೆಗುರುಳಿದ್ದರೆ, 139 ಟ್ರಾನ್ಸ್ ಫಾರ್ಮರ್ಗಳು ಹಾನಿಗೊಂಡಿದೆ.
Advertisement
ಜಿಲ್ಲೆಯ ಭಟ್ಕಳ, ಅಂಕೋಲ, ಮುಂಡಗೋಡು ಸೇರಿ 3.57 ಹೆಕ್ಟೇರ್ ತೋಟಗಾರಿಕಾ ಭಾಗಗಳಿಗೆ ಹಾನಿಯಾಗಿದೆ. ಜಿಲ್ಲೆಯಲ್ಲಿ ಹೊನ್ನಾವರ, ಭಟ್ಕಳ, ಕುಮಟಾ ಸೇರಿ ಒಟ್ಟು ಏಳು ಕಾಳಜಿ ಕೇಂದ್ರ ತೆರೆದಿದ್ದು, ಜಿಲ್ಲಾಡಳಿತ ಆಶ್ರಯ ನೀಡಿದೆ. ಇಂದು ಮಳೆ ಅಬ್ಬರ ಕಡಿಮೆಯಾಗಿದ್ದು, ಅಲೆಗಳ ಅಬ್ಬರ ಹಾಗೂ ಗಾಳಿಯ ಅಬ್ಬರ ಇಳಿಮುಖವಾಗುತ್ತಿದೆ.