– ಕನ್ನಡದ ಮುಖಂಡರು ಹೇಳಿದ್ದನ್ನು ಮಾಡಲು ಸಿದ್ಧ
ಬೆಂಗಳೂರು: ನಾಳೆಯ ಕರ್ನಾಟಕ ಬಂದ್ಗೆ ಅವಕಾಶ ಇಲ್ಲ. ದಯಮಾಡಿ ಯಾರೂ ಬಂದ್ ಮಾಡಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕನ್ನಡಪರ ಸಂಘಟನೆಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
Advertisement
ಸುತ್ತೂರು ಮಠದ ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳನ್ನು ಬನಶಂಕರಿಯಲ್ಲಿ ಸತ್ತೂರು ಸದನದಲ್ಲಿ ಭೇಟಿ ಮಾಡಿ ಸಿಎಂ ಯಡಿಯೂರಪ್ಪ ಅವರು ಶ್ರೀಗಳ ಆಶೀರ್ವಚನ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ ನಾಳೆಯ ಬಂದ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಂದ್ ಮಾಡದಂತೆ ಮನವಿ ಮಾಡಿಕೊಂಡರು. ಬಂದ್ ಮಾಡಿ ಜನರಿಗೆ ತೊಂದರೆ ಕೊಡುವ ಕೆಲಸ ಮಾಡಬೇಡಿ. ಬಂದ್ ಮಾಡುವ ಅಗತ್ಯ ಇಲ್ಲ. ಎಲ್ಲ ಸಮಾಜವನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ ಎಂದರು.
Advertisement
Advertisement
ಕನ್ನಡಕ್ಕೆ ಏನೇನೋ ಆದ್ಯತೆ ಕೊಡಬೇಕೋ, ಇನ್ನೂ ಹೆಚ್ಚಿನದಾಗಿ ಏನೇನೋ ಕೊಡಬೇಕೋ ಅದನ್ನು ಕೊಡಲು ನಾನು ಸಿದ್ಧನಿದ್ದೇನೆ. ಕನ್ನಡದ ಮುಖಂಡರು ಏನು ಹೇಳ್ತಾರೋ ಅದನ್ನು ನಾನು ಮಾಡಲು ಸಿದ್ಧನಿದ್ದೇನೆ. ದಯಮಾಡಿ ಬಂದ್ ಗೆ ಎಲ್ಲಿಯೂ ಕೂಡ ಅವಕಾಶ ಇಲ್ಲ. ಯಾರು ಕೂಡ ಬಂದ್ ಮಾಡಬೇಡಿ. ದಯವಿಟ್ಟು ಇದಕ್ಕೆ ಎಲ್ಲರು ಸಹಕರಿಸಿಬೇಕು ಎಂದು ಸಿಎಂ ಮತ್ತೊಮ್ಮೆ ಮನವಿ ಮಾಡಿಕೊಂಡಿದ್ದಾರೆ.
Advertisement
ಕೋವಿಡ್ ಎರಡನೇ ಅಲೆ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿ ವಿಚಾರದ ಬಗ್ಗೆ ಯಾವುದೇ ಯೋಚನೆ ಇಲ್ಲ ಅಂತ ಇದೇ ವೆಳೆ ಸಿಎಂ ಸ್ಪಷ್ಟಪಡಿಸಿದರು. ಇಂದು ಮಧ್ಯಾಹ್ನ ಬೆಳಗಾವಿ ಗೆ ಹೋಗ್ತಿದ್ದೇನೆ. ನಾಳೆ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕಾರಿಣಿ ಇದೆ. ಅದು ಮುಗಿಸಿ ನಾಳೆ ಸಂಜೆ ವಾಪಸ್ ಬರುತ್ತೇನೆ. ಬಂದು ಉಳಿದ ವಿಷಯಗಳ ಬಗ್ಗೆ ತಿಳಿಸುತ್ತೇನೆ ಎಂದರು.