ಬೆಂಗಳೂರು: ಜೆಡಿಎಸ್ ಮುಖಂಡ, ಮಾಜಿ ಸಚಿವ ಜೀವಿಜಯ ಅವರು ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ಬಾವುಟ ನೀಡುವ ಮೂಲಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಪಕ್ಷಕ್ಕೆ ಬರಮಾಡಿಕೊಂಡರು. ಜೀವಿಜಯ ಸೇರ್ಪಡೆ ಆಗುತ್ತಿದ್ದಂತೆ ಕಲಾಪದಲ್ಲಿ ಭಾಗವಹಿಸಲು ಸಿದ್ದರಾಮಯ್ಯ ವಿಧಾನಸೌಧಕ್ಕೆ ತೆರಳಿದರು.
Advertisement
ಕೆಪಿಸಿಸಿ ಅಧ್ಯಕ್ಷರಾದ @DKShivakumar ಅವರ ನೇತೃತ್ವದಲ್ಲಿ ಮಾಜಿ ಸಚಿವರು, ಜೆಡಿಎಸ್ ನಾಯಕರಾದ ಜೀವಿಜಯ ಅವರು ತಮ್ಮ ಬೆಂಬಲಿಗರೊಂದಿಗೆ ಪಕ್ಷಕ್ಕೆ ಸೇರ್ಪಡೆಯಾದರು.
ವಿರೋಧ ಪಕ್ಷದ ನಾಯಕರಾದ @siddaramaiah, ಕಾರ್ಯಾಧ್ಯಕ್ಷರಾದ @SaleemAhmadINC ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. pic.twitter.com/wE1XtyLxoQ
— Karnataka Congress (@INCKarnataka) December 9, 2020
Advertisement
ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿದ ಜೀವಿಜಯ, ನಾನು ಮೊದಲು ಕಾಂಗ್ರೆಸ್ ನಲ್ಲೇ ಇದ್ದವನು. ಈಗ ರಾಜಕೀಯದಲ್ಲಿ ಸಕ್ರೀಯವಾಗಿಲ್ಲ. ಆದರೆ ದೇಶದಲ್ಲಿ ಜಾತ್ಯಾತೀತ ತತ್ವಗಳಿಗೆ ತೊಂದರೆ ಆಗುತ್ತಿದೆ. ನಿನ್ನೆ ಜೆಡಿಎಸ್ ಪಕ್ಷದ ನಿಲುವು ನೋಡಿ ನನಗೆ ರಾತ್ರಿ ನಿದ್ದೆ ಬರಲಿಲ್ಲ. ಜಾತ್ಯಾತೀತ ಅಂತ ಹೇಳಿಕೊಳ್ಳುವ ಪಕ್ಷದ ನಡೆ ನೋಡಿ ನನಗೆ ತೀವ್ರ ಬೇಸರವಾಯಿತು. ಭೂ ಸುಧಾರಣಾ ಕಾಯ್ದೆ ಪಾಸ್ ಮಾಡಲು ಬಿಜೆಪಿಗೆ ಸಹಕರಿಸಿದ ಜೆಡಿಎಸ್ ಟೀಕಿಸಿದರು.
Advertisement
ಜೀ ವಿಜಯ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಉಪಸ್ಥಿತರಿದ್ದರು.
Advertisement
ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್, ವಿಧಾನ ಪರಿಷತ್ ಸದಸ್ಯರಾದ ಅಲ್ಲಂ ವೀರಭದ್ರಪ್ಪ, ವೀಣಾ ಅಚ್ಚಯ್ಯ, ಶಾಸಕ ಟಿ.ಡಿ ರಾಜೇಗೌಡ, ಜಿಲ್ಲಾಧ್ಯಕ್ಷ ಮಂಜುನಾಥ್ ಕುಮಾರ್, ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ, ಕಾನೂನು ವಿಭಾಗದ ಮುಖ್ಯಸ್ಥ ಪೊನ್ನಣ್ಣ, ಜಿಲ್ಲಾ ವೀಕ್ಷಕರಾದ ಮಂಜುಳಾ ರಾಜ್, ಟಿ.ಎಂ ಶಹೀದ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. pic.twitter.com/HLJVRL4Git
— Karnataka Congress (@INCKarnataka) December 9, 2020
ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ನನ್ನ ಹೆಸರು ಹೇಳಿಲ್ಲ ಎಂದು ಮಡಕೇರಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಾ ರಾವ್ ಎದ್ದು ನಿಂತು ಆಕ್ಷೇಪ ವ್ಯಕ್ತಪಡಿಸಿದರು. ಡಿ.ಕೆ.ಶಿವಕುಮಾರ್ ನನ್ನ ಹೆಸರು ಹೇಳಿಲ್ಲ ಎಂದು ರಾಜಾರಾವ್ ಎದ್ದು ನಿಂತರು. ಬಳಿಕ ಹೆಸರು ಹೇಳಿದ್ದೇವೆ ಎಂದು ನಾಯಕರು ಸಮಾಧಾನ ಮಾಡಿ ಕೂರಿಸಿದರು.