ಮುಂಬೈ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಅಧ್ಯಕ್ಷರಾಗುವ ಊಹಾಪೋಹಗಳಿಗೆ ತೆರೆಬಿದ್ದಿದೆ.
ಬಿಸಿಸಿಐ ಮೂಲಗಳ ಪ್ರಕಾರ ಸೌರವ್ ಗಂಗೂಲಿ ಐಸಿಸಿ ಅಧ್ಯಕ್ಷರಾಗುವುದಿಲ್ಲ. ಏಕೆಂದರೆ ಪ್ರಸ್ತುತ ಐಸಿಸಿ ಅಧ್ಯಕ್ಷ ಶಶಾಂಕ್ ಮನೋಹರ್ ಅವರ ಅವಧಿ ಈ ತಿಂಗಳು ಕೊನೆಗೊಳ್ಳಲಿದೆ. ಹೀಗಾಗಿ ಅವರ ಸ್ಥಾನಕ್ಕೆ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಕಾಲಿನ್ ಗ್ರೇವ್ಸ್ ಅವರನ್ನು ನೇಮಿಸಲು ಸಿದ್ಧತೆ ನಡೆದಿದೆ.
Advertisement
Advertisement
ಐಸಿಸಿ ಅಧ್ಯಕ್ಷ ಹುದ್ದಗೆ ಸೌರವ್ ಗಂಗೂಲಿ ಅವರ ಹೆಸರು ಕೇಳಿಬಂದಿತ್ತು. ಆದರೆ ಐಸಿಸಿ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಕಾಲಿನ್ ಗ್ರೇವ್ಸ್ ಅಧ್ಯಕ್ಷರಾಗಲು ದಾರಿ ಮಾಡಿಕೊಟ್ಟಿದೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾದ ಕ್ರಿಕೆಟ್ ಮಂಡಳಿ ಮುಖ್ಯಸ್ಥ ಗ್ರೇಮ್ ಸ್ಮಿತ್ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಗಂಗೂಲಿ ಹೆಸರನ್ನು ಬೆಂಬಲಿಸಿದ್ದರು. ಐಸಿಸಿ ಅಧ್ಯಕ್ಷ ಹುದ್ದೆಗೆ ಗಂಗೂಲಿ ಅತ್ಯುತ್ತಮ ವ್ಯಕ್ತಿ ಎಂದು ಅವರು ಬಣ್ಣಿಸಿದ್ದರು. ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಡೇವಿಡ್ ಗೋವರ್ ಕೂಡ ಗಂಗೂಲಿಯನ್ನು ಬೆಂಬಲಿಸಿದ್ದರು.
Advertisement
Advertisement
ಟೀಂ ಇಂಡಿಯಾ ಮಾಜಿ ನಾಯಕ ಗಂಗೂಲಿ ಅವರಿಗೆ ಆಧುನಿಕ ಆಟ ಹಾಗೂ ಮುಂಬರುವ ಸವಾಲುಗಳ ಬಗ್ಗೆ ಉತ್ತಮ ತಿಳುವಳಿಕೆ ಇದೆ. ಅವರು ಅಧ್ಯಕ್ಷರಾಗುವುದರಿಂದ ಅನೇಕ ಬದಲಾವಣೆ, ಸುಧಾರಣೆಗಳನ್ನು ತರಬಹುದು ಎಂದು ಸ್ಮಿತ್ ಹೇಳಿದ್ದರು. ಆದಾಗ್ಯೂ ಸ್ಮಿತ್ ಅವರ ವಿಚಾರಗಳನ್ನು ಕ್ರಿಕೆಟ್ ದಕ್ಷಿಣ ಆಫ್ರಿಕಾದ ಹಂಗಾಮಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಜಾಕ್ ಫಾಲ್ ಅನುಮೋದಿಸಲಿಲ್ಲ.
ವಿಶೇಷವೆಂದರೆ, 2008ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾದ ಗಂಗೂಲಿ, 2015ರಲ್ಲಿ ಕ್ರಿಕೆಟ್ ಅಸೋಸಿಯೇಷನ್ ಆಫ್ ಬಂಗಾಳದ (ಸಿಎಬಿ) ಅಧ್ಯಕ್ಷರಾಗಿದ್ದರು. ಬಿಸಿಸಿಐ ಅಧ್ಯಕ್ಷರಾಗುವ ಮೊದಲು ಐಪಿಎಲ್ 2019ರಲ್ಲಿ ದೆಹಲಿ ಕ್ಯಾಪಿಟಲ್ ತಂಡದ ಸಲಹೆಗಾರರಾಗಿದ್ದರು. ನಂತರ 2019ರ ಅಕ್ಟೋಬರ್ ನಲ್ಲಿ ಬಿಸಿಸಿಐ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.