– ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅತಿದೊಡ್ಡ ಮಾದಕ ಜಾಲ ಪತ್ತೆ ಮಾಡಿದ್ದಾರೆ.
ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ 35 ವರ್ಷದ ಮಹಿಳೆಯನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆ ಸೂಟ್ ಕೇಸ್ ತಳ ಭಾಗದಲ್ಲಿ ಮರೆಮಾಚಿ 8 ಕೆ.ಜಿ. ತೂಕದ 56 ಕೋಟಿ ರೂ. ಮೌಲ್ಯದ ಹೆರಾಯಿನ್ ಕಳ್ಳ ಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
Advertisement
Advertisement
ಮಹಿಳೆಯನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು, ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೆ ಈ ಕುರಿತು ತನಿಖೆ ನಡೆಸಿ, ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.