ಹುಬ್ಬಳ್ಳಿ: ಬೆಲ್ಲದ ಹಾಗೂ ಯೋಗೀಶ್ವರ ದೆಹಲಿ ಭೇಟಿ ವಿಚಾರಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡವೆಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
Advertisement
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧಾರವಾಡ ಶಾಸಕ ಅರವಿಂದ ಬೆಲ್ಲದ ಹಾಗೂ ಸಚಿವ ಸಿಪಿ ಯೋಗೀಶ್ವರ ದೆಹಲಿಗೆ ಅವರು ಯಾಕೆ ಹೋಗಿದ್ದಾರೆ ಅಂತಾ ಅವರನ್ನೇ ಹೇಳಬೇಕು. ಅವರು ದೆಹಲಿ ಹೋದ ಕೂಡಲೇ ಅದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಯಾಕಂದ್ರೆ ಈಗಾಗಲೇ ನಮ್ಮ ಪಕ್ಷದ ಉಸ್ತುವಾರಿಯಾದ ಅರುಣಸಿಂಗ್ ಅವರು ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಎಲ್ಲವೂ ಕ್ಲಿಯರ್ ಆಗಿ ಇದೆ ಸ್ಪಷ್ಟ ಪಡಿಸಿದ್ದಾರೆ. ಇದನ್ನೂ ಓದಿ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ- ಒಂದು ವಾರ ಆರೆಂಜ್ ಅಲರ್ಟ್ ಘೋಷಣೆ
Advertisement
ಇಂದು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ಆವರಣದಲ್ಲಿ ವೇದಾಂತ ಕಂಪನಿಯ ಸಿ.ಎಸ್.ಆರ್. ಅನುದಾನದಡಿ ನಿರ್ಮಾಣವಾದ 100 ಆಕ್ಸಿಜನೇಟೆಡ್ ಹಾಸಿಗೆ ಸಾಮರ್ಥ್ಯದ “ವೇದಾಂತ ಕೇರ್ಸ್ ಕೋವಿಡ್ ಫೀಲ್ಡ್ ಹಾಸ್ಪಿಟಲ್” ಅನ್ನು ಉದ್ಘಾಟಿಸಿ, ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.
#KarnatakaFightsCorona | #MaskUpKarnataka | #Unite2FightCorona pic.twitter.com/8QuLMbXHKZ
— Jagadish Shettar (@JagadishShettar) June 12, 2021
Advertisement
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲ. ಅಲ್ಲದೇ ಸಧ್ಯಕ್ಕೆ ಸಚಿವ ಸಂಪುಟ ಪುನಾರಚನೆ. ವಿಸ್ತರಣೆಯ ಯಾವ ಪ್ರಸ್ತಾಪವೂ ಸಹ ಇಲ್ಲ. ಈ ಬಗ್ಗೆ ಪಕ್ಷದಲ್ಲಿ ಆಗಲಿ ಹೈಕಮಾಂಡ ಮಟ್ಟದಲ್ಲಿ ಆಗಲಿ ಯಾವುದೇ ಚರ್ಚೆಗಳು ನಡೆದಿಲ್ಲ. ಸಂಪುಟ ಪುನಾರಚನೆ ಪ್ರಶ್ನೆ ಸದ್ಯಕ್ಕಿಲ್ಲವೆಂದು ತಿಳಿಸಿದ್ದಾರೆ.
Advertisement
ಇಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ಎಲ್ & ಟಿ ಕಂಪನಿಯ ಸಿ.ಎಸ್.ಆರ್. ಅನುದಾನದಡಿ ನಿರ್ಮಾಣವಾದ ಆಮ್ಲಜನಕ ಉತ್ಪಾದನಾ ಘಟಕವನ್ನು ಉದ್ಘಾಟಿಸಲಾಯಿತು. ಇದೇ ವೇಳೆ ಆಸ್ಪತ್ರೆಯಲ್ಲಿ ಕೋವಿಡ್ ತುರ್ತು ಚಿಕಿತ್ಸೆಗೆ ನೆರವಾಗಲೆಂದು ನೀಡಿದ 9 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಆಸ್ಪತ್ರೆಯ ಆಡಳಿತ ಮಂಡಳಿಯವರಿಗೆ ಹಸ್ತಾಂತರಿಸಲಾಯಿತು. pic.twitter.com/C29BxSAZPU
— Jagadish Shettar (@JagadishShettar) June 12, 2021
ಕಾಂಗ್ರೆಸ್ ನಾಯಕ ದ್ವಿಗಜಯಸಿಂಗ್ ಅವರು ಜಮ್ಮು ಕಾಶ್ಮೀರಕ್ಕೆ ಮತ್ತೆ 371 ಮಾನ್ಯತೆ ನೀಡೋ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷ ದೇಶವನ್ನ ಲೂಟಿ ಮಾಡಿದ ನಂತರ ಮತ್ತೆ ಕಾಶ್ಮೀರಕ್ಕೆ ಮಾನ್ಯತೆ ನೀಡುತ್ತೇವೆ ಅನ್ನೋದು ಕಾಂಗ್ರೆಸ್ ಮೂರ್ಖತನದ ಪರಮಾವಧಿ ಎಂದು ಜಗದೀಶ್ ಶೆಟ್ಟರ್ ಕಾಂಗ್ರೆಸ್ ವಿರುದ್ದ ಹರಿಹಾಯ್ದಿದ್ದಾರೆ.
ಜಮ್ಮು ಕಾಶ್ಮೀರ ಹಾಳು ಮಾಡಿದ್ದೆ ಕಾಂಗ್ರೆಸ್ ಪಕ್ಷ. ಕಾಂಗ್ರೆಸ್ ನಾಯಕರು ದೇಶದಲ್ಲಿ ಉಗ್ರಗ್ರಾಮಿಗಳು ದಾಳಿ ಮಾಡಲು ಅನೂಕೂಲ ಮಾಡಿಕೊಟ್ಟರು. ಆ ಮೂಲಕ ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಪಕ್ಷ ಹಾಗೂ ಕೈ ನಾಯಕರ ವಿರುದ್ದ ವಾಗ್ದಾಳಿ ಮಾಡಿದ್ದಾರೆ.