ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು 34 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 76,472 ಮಂದಿಗೆ ಕೊರೊನಾ ಮಹಾಮಾರಿ ಅಂಟಿಕೊಂಡಿದೆ.
India's #COVID19 case tally crosses 34 lakh mark with a spike of 76,472 new cases & 1,021 deaths in the last 24 hours.
COVID-19 case tally in the country stands at 34,63,973 including 7,52,424 active cases, 26,48,999 cured/discharged/migrated & 62,550 deaths: Health Ministry pic.twitter.com/uDp0L32KpO
— ANI (@ANI) August 29, 2020
Advertisement
ಒಂದೇ ದಿನ 1,021 ಮಂದಿ ಚೀನಿ ವೈರಸ್ ಗೆ ಬಲಿಯಾಗಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 34,63,973ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆಯಲ್ಲಿ 7,52,424 ಸಕ್ರಿಯ ಪ್ರಕರಣಗಳಿದ್ದು, 26,48,999 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದೂವರೆಗೂ 62,550 ಮಂದಿ ಕೋವಿಡ್ 19ಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನಿಡಿದೆ.
Advertisement
Advertisement
ದೇಶದಲ್ಲಿ ನಿನ್ನೆ ಒಂದೇ ದಿನ 9,01,338 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 3,94,77,848 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.
Advertisement
COVID-19 Testing Update . For more details visit: https://t.co/dI1pqvXAsZ @MoHFW_INDIA @DeptHealthRes #ICMRFIGHTSCOVID19 #IndiaFightsCOVID19 #CoronaUpdatesInIndia #COVID19 pic.twitter.com/EB4Lv9Tc7i
— ICMR (@ICMRDELHI) August 28, 2020