ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ನರ್ತನ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ.
ಕಳೆದ 24 ಗಂಟೆಯಲ್ಲಿ ಬರೋಬ್ಬರಿ 2,76,070 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಈ ಮೂಲಕ ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ 2,57,72,400ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 3,874 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಇದುವರೆಗೆ 2,87,122 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.
India reports 2,76,070 new #COVID19 cases, 3,69,077 discharges & 3,874 deaths in last 24 hrs, as per Health Ministry.
Total cases: 2,57,72,400
Total discharges: 2,23,55,440
Death toll: 2,87,122
Active cases: 31,29,878
Total vaccination: 18,70,09,792 pic.twitter.com/ZyTh8pZano
— ANI (@ANI) May 20, 2021
ಸದ್ಯ ದೇಶದಲ್ಲಿ 31,29,878 ಸಕ್ರಿಯ ಪ್ರಕರಣಗಳಿವೆ. 2,23,55,440 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 18,70,09,792 ಮಂದಿ ಮುಂಜಾಗ್ರತಾ ಕ್ರಮವಾಗಿ ವಾಕ್ಸಿನ್ ಪಡೆದುಕೊಂಡಿದ್ದಾರೆ.
ದೇಶದಲ್ಲಿ ನಿನ್ನೆ ಒಂದೇ ದಿನ 20,55,010 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 32,23,56,187 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.
https://twitter.com/ANI/status/1395228288151212032/photo/1