– 12 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
– ಡಿಸಿಎಂ ಲಕ್ಷ್ಮಣ್ ಸವದಿ ಉದ್ಘಾಟನೆ
ಬೆಂಗಳೂರು: ಕೆಎಸ್ಆರ್ಟಿಸಿ ಹಾಗೂ ಬಿಐಎಎಲ್ ಸಹಯೋಗದಲ್ಲಿ ಹಳೆಯ ಬಸ್ಸಿನಲ್ಲಿ ನಿರ್ಮಿಸಿದ ಮಹಿಳಾ ಶೌಚಾಲಯವನ್ನು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಇಂದು ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ಉದ್ಘಾಟಿಸಿದರು.
Advertisement
ಕೆಎಸ್ಆರ್ಟಿಸಿಯು ಒಂದು ಅನುಪಯುಕ್ತ ಬಸ್ಸನ್ನು ಸುಸಜ್ಜಿತ ಮಹಿಳಾ ಶೌಚಾಲಯವನ್ನಾಗಿ ನಿರ್ಮಿಸಲಾಗಿದ್ದು, “ಸ್ತ್ರೀ ಶೌಚಾಲಯ”ಎಂದು ಹೆಸರಿಸಲಾಗಿದೆ. ಈ ಮೂಲಕ ಸ್ವಚ್ಛತೆಯತ್ತ ಮತ್ತೊಂದು ಹೆಜ್ಜೆಯನ್ನು ಇಟ್ಟಿದೆ. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಬೆಂಗಳೂರುರವರು ಈ ಶೌಚಾಲಯದ ವೆಚ್ಚವನ್ನು ತಮ್ಮ ಸಾಮಾಜಿಕ ಕಳಕಳಿ(ಸಿಎಸ್ಆರ್) ಯೋಜನೆಯಡಿ ನೀಡಿದ್ದಾರೆ.
Advertisement
Advertisement
ಈ ಶೌಚಾಲಯದಲ್ಲಿ ಮಗುವಿಗೆ ಹಾಲುಣಿಸುವ ಸ್ಥಳ, ಸ್ಯಾನಿಟರಿ ನ್ಯಾಪ್ಕಿನ್ ವೆಂಡಿಂಗ್ ಯಂತ್ರ, ಇನ್ಸಿನಿರೇಟರ್, ಮಗುವಿಗೆ ಡೈಪರ್ ಬದಲಿಸುವ ಸ್ಥಳ, ಭಾರತೀಯ ಮತ್ತು ವಿದೇಶಿ ಮಾದರಿಯ ಶೌಚಾಲಯಗಳು, ಕೈ ತೊಳೆಯುವ ಬೇಸಿನ್ಗಳು, ಸಂವೇದಕ ದೀಪಗಳು ಹಾಗೂ ಸಂಪೂರ್ಣ ಸೌರ ವಿದ್ಯುತ್ ಅಳವಡಿಸಲಾಗಿದೆ.
Advertisement
ಶೌಚಾಲಯದ ನಿರ್ಮಾಣ ವೆಚ್ಚ ಒಟ್ಟು ರೂ.12 ಲಕ್ಷಗಳಾಗಿದೆ. ಮಹಿಳಾ ಸ್ವಾಸ್ಥ್ಯ ಸಮಾಜ ನಿಗಮದ ಕಾಳಜಿಯಾಗಿದೆ. ದೇಶದ ರಸ್ತೆ ಸಾರಿಗೆ ನಿಗಮಗಳಲ್ಲಿಯೇ ಪ್ರಪ್ರಥಮ ಬಾರಿಗೆ ಇಂತಹ ಸುಸಜ್ಜಿತ ಶೌಚಾಲಯವನ್ನು ಅನುಪಯುಕ್ತ ಬಸ್ಸಿನಲ್ಲಿ ನಿರ್ಮಿಸಲಾಗಿದೆ. ನಿಗಮವು ಹಲವು ಮಹಿಳಾ ಸ್ನೇಹಿ ಉಪಕ್ರಮಗಳನ್ನು ಜಾರಿಗೆ ತಂದಿದೆ. ಬಸ್ ನಿಲ್ದಾಣ ಹಾಗೂ ಬಸ್ಸುಗಳನ್ನು ಮಹಿಳಾ ಸ್ನೇಹಿಯಾಗಿಸುವ ನಿಟ್ಟಿನಲ್ಲಿ ನಮ್ಮ ಪ್ರಯತ್ನವು ನಿತಂತರವಾಗಿ ಮುಂದುವರಿದಿದೆ.
ಬಸ್ ನಿಲ್ದಾಣಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರೊಂದಿಗೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದು ಪ್ರಮುಖ ಕಾಳಜಿಯೆಂದು ನಿಗಮವು ಮನಗಂಡಿದೆ. ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ನಿಗಮದ ಪ್ರಥಮ ಆದ್ಯತೆಯಾಗಿದ್ದು, ಕೊವಿಡ್-19 ಸಂದರ್ಭದಲ್ಲಿ ಸದರಿ ಶೌಚಾಲಯ ಪ್ರಾರಂಭ ಮಾದರಿಯಾಗಲಿದೆ. ಸ್ವಚ್ಛ ಭಾರತದ ಪರಿಕಲ್ಪನೆಯನ್ನು ಸಾಕಾರ ಮಾಡುವ ನಿಟ್ಟಿನಲ್ಲಿ ಕೆಎಸ್ಆರ್ಟಿಸಿಯ ಪ್ರಯತ್ನ ಶ್ಲಾಘನೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅಲ್ಲದೆ ಇದೇ ರೀತಿಯಲ್ಲಿ ಅನುಪಯುಕ್ತ ಬಸ್ಸುಗಳನ್ನು ವಿವಿಧ ಯೋಜನೆಗಳಿಗೆ ಉಪಯೋಗಿಸಲು ಸಲಹೆ ನೀಡಿದರು.
ಮಹಿಳಾ ಶೌಚಾಲಯ ನಿರ್ಮಿಸಿದ ಬಸ್ಸು ಅನುಪಯುಕ್ತವಾಗಿರುವುದರಿಂದ ಚಲಿಸುವುದಿಲ್ಲ. ಕೆಂಪೇಗೌಡ ಬಸ್ ನಿಲ್ದಾಣ, ಟರ್ಮಿನಲ್-1 ರಲ್ಲಿ ಮಹಿಳಾ ಪ್ರಯಾಣಿಕರ ಸೇವೆಗಾಗಿ ನಿಲ್ಲಿಸಲಾಗಿರುತ್ತದೆ ಎಂದು ಕರ್ನಾಟಕ ರಾಜ್ಯಸ ರಸ್ತೆ ಸಾರಿಗೆ ನಿಗಮ ವಿವರಿಸಿದೆ.