– ಮಗನಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ್ದಾಳೆ
ನವದೆಹಲಿ: ಮೃತ ಸುಶಾಂತ್ ಸಿಂಗ್ ರಜಪೂತ್ ಅವರ ಪ್ರೇಯಸಿ ರಿಯಾ ಚಕ್ರವರ್ತಿ ವಿರುದ್ಧ ನಟನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ಕಳೆದ ಜೂನ್ 14ರಂದು ಮುಂಬೈನ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಾದ ನಂತರ ಅವರ ಸಾವಿನ ಸುತ್ತ ಹಲವಾರು ಅನುಮಾನಗಳು ಮೂಡಿದ್ದವು. ಈಗ ಸುಶಾಂತ್ ಸಾವನ್ನಪ್ಪಿ ಒಂದು ತಿಂಗಳ ನಂತರ ಅವರ ತಂದೆ ನಟಿ ರಿಯಾ ಚಕ್ರವರ್ತಿ ವಿರುದ್ಧ ದೂರು ನೀಡಿದ್ದಾರೆ.
Advertisement
Advertisement
ಸುಶಾಂತ್ ಸಿಂಗ್ ಸಾವಿನ ನಂತರ ಹಲವಾರು ಚರ್ಚೆಗಳು ಆರಂಭವಾಗಿದ್ದವು. ಅವರು ಖಿನ್ನತೆಗೆ ಒಳಗಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿತ್ತು. ಜೊತೆಗೆ ಹಲವರು ಕೊಲೆ ಎಂದು ಆರೋಪಿಸಿದ್ದರು. ಈಗ ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬ, ರಿಯಾ ಚಕ್ರವರ್ತಿಯೇ ಸುಶಾಂತ್ಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ್ದಾಳೆ. ಆಕೆ ಆತನಿಗೆ ಆರ್ಥಿಕವಾಗಿ ಮೋಸ ಮಾಡಿದ್ದಾಳೆ ಮತ್ತು ಮಾನಸಿಕವಾಗಿ ಕಿರುಕುಳ ನೀಡಿದ್ದಾಳೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಇದನ್ನು ಓದಿ: ‘ಹೃದಯಕ್ಕಾದ ಗಾಯ ಇನ್ನು ವಾಸಿಯಾಗಿಲ್ಲ’- ಸುಶಾಂತ್ ಸಿಂಗ್ ಪ್ರೇಯಸಿಯ ಎಮೋಷನಲ್ ಪೋಸ್ಟ್
Advertisement
ಇತ್ತೀಚೆಗೆ ತನ್ನ ಪ್ರಿಯಕರನ ಸಾವಿನ ಬಗ್ಗೆ ಪೋಸ್ಟ್ ಹಾಕಿಕೊಂಡಿದ್ದ ರಿಯಾ ಚಕ್ರವರ್ತಿ, ಸುಶಾಂತ್ ಅವರ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆ ನೀಡಬೇಕು. ಈ ಪ್ರಕರಣ ಯಾವುದೇ ಲೋಪದೋಷವಿಲ್ಲದೇ ತನಿಖೆ ಆಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಳಿ ಬೇಡಿಕೆ ಇಟ್ಟಿದ್ದರು. ಇದಾದ ಬಳಿಕ ಈ ವಿಚಾರವಾಗಿ ಮಾತನಾಡಿದ್ದ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್, ಸುಶಾಂತ್ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ಹೇಳಿದ್ದರು.
Advertisement
ಸುಶಾಂತ್ ಸಿಂಗ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ, ನಿರ್ದೇಶಕ-ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ, ಚಲನಚಿತ್ರ ನಿರ್ಮಾಪಕ ಆದಿತ್ಯ ಚೋಪ್ರಾ, ನಿರ್ದೇಶಕ ಮುಖೇಶ್ ಛಬ್ರಾ, ಚಲನಚಿತ್ರ ನಿರ್ಮಾಪಕ ಶೇಖರ್ ಕಪೂರ್, ಚಲನಚಿತ್ರ ವಿಮರ್ಶಕ ರಾಜೀವ್ ಮಸಂದ್ ಸೇರಿದಂತೆ ಸುಮಾರು 40 ಜನರು ತಮ್ಮ ಹೇಳಿಕೆಗಳನ್ನು ಮುಂಬೈ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಜೊತೆಗೆ ಇತ್ತೀಚೆಗೆ ನಿರ್ದೇಶಕ ಮಹೇಶ್ ಭಟ್ ಮತ್ತು ಕರಣ್ ಜೋಹಾರ್ ಮ್ಯಾನೇಜರ್ ಅವರನ್ನು ವಿಚಾರಣೆ ಮಾಡಲಾಗಿದೆ.
ಇದರ ಜೊತೆಗೆ ನಟಿ ರಿಯಾ ಚಕ್ರವರ್ತಿಯವರನ್ನು ವಿಚಾರಣೆ ಮಾಡಲಾಗಿದೆ. ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ. ಅವರು ಬಾಲಿವುಡ್ನಲ್ಲಿರುವ ಸ್ವಜನಪಕ್ಷಪಾತಕ್ಕೆ ಬಲಿಯಾಗಿದ್ದಾರೆ. ಬಾಲಿವುಡ್ ಮೂವಿ ಮಾಫಿಯಾ ಅವರನ್ನು ಪ್ಲಾನ್ ಮಾಡಿ ಮರ್ಡರ್ ಮಾಡಿದೆ ಎಂದು ನಟಿ ಕಂಗನಾ ರಣಾವತ್ ಅವರು ಆರೋಪಿಸಿದ್ದರು. ಹೀಗಾಗಿ ಈ ಪ್ರಕರಣದಲ್ಲಿ ಅವರಿಗೂ ಸಮನ್ಸ್ ನೀಡಿದ್ದು, ಅವರನ್ನು ಕೂಡ ವಿಚಾರಣೆ ಮಾಡಲಾಗುತ್ತದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.