ಬೆಂಗಳೂರು: ನನಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ ಎಂದು ಪೊಲೀಸ್ ಅಧಿಕಾರಿಗಳಿಗೆ ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ.
ಎಲ್ಲರಂತೆ ನಾನೂ ಸಂಚರಿಸುತ್ತೇನೆ. ನನಗಾಗಿ ಯಾವುದೇ ವಿಶೇಷ ಸೌಲಭ್ಯ ಬೇಡ ಎಂದು ಹೇಳುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಇದನ್ನೂ ಓದಿ : 3 ದಿನಗಳ ಹಿಂದೆ ಝೀರೋ ಟ್ರಾಫಿಕ್ – ಇಂದು ಮಾಜಿ ಸಿಎಂಗೆ ಟ್ರಾಫಿಕ್ ಬಿಸಿ
Advertisement
Advertisement
ರಾಜ್ಯದ ಮುಖ್ಯಮಂತ್ರಿಗಳು ಝೀರೋ ಟ್ರಾಫಿಕ್ನಲ್ಲಿ ಸಂಚರಿಸಲು ಅವಕಾಶವಿದೆ. ಆದರೆ ಮಂತ್ರಿಗಳಿಗೆ ಈ ವಿಶೇಷ ಸೌಲಭ್ಯವಿಲ್ಲ. ಅವಕಾಶ ಇಲ್ಲದೇ ಇದ್ದರೂ ಕೆಲ ಮಂತ್ರಿಗಳು ಪ್ರಭಾವ ಬಳಸಿ ಝೀರೋ ಟ್ರಾಫಿಕ್ನಲ್ಲಿ ಸಂಚರಿಸುತ್ತಾರೆ. ಇದರಿಂದಾಗಿ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುತ್ತದೆ. ಇದನ್ನೂ ಓದಿ : ಡಿಸಿಎಂಗೆ ಇನ್ನೂ ಹೋಗಿಲ್ಲ ಝೀರೋ ಟ್ರಾಫಿಕ್ ಮೋಹ
Advertisement
ಈ ಹಿಂದೆ ಸಿದ್ದರಾಮಯ್ಯ ಆಡಳಿತದ ಅವಧಿಯಲ್ಲಿ ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರಾಗಿದ್ದ ಜಿ ಪರಮೇಶ್ವರ ಅವರು ಝೀರೋ ಟ್ರಾಫಿಕ್ನಲ್ಲಿ ಸಂಚರಿಸಿದ್ದು ಟೀಕೆ ಗುರಿಯಾಗಿತ್ತು. ಈ ಬಾರಿ ಪ್ರಮಾಣವಚನ ಸಮಾರಂಭಕ್ಕೆ ಶಶಿಕಲಾ ಜೊಲ್ಲೆಯವರು ತಡವಾಗಿ ಆಗಮಿಸಿದ್ದರು. ವಿಮಾನ ನಿಲ್ದಾಣದಿಂದ ರಾಜಭವನದವರೆಗೆ ಝೀರೋ ಟ್ರಾಫಿಕ್ ನಲ್ಲಿ ಬಂದಿದ್ದಕ್ಕೆ ಟೀಕೆ ವ್ಯಕ್ತವಾಗಿತ್ತು.