ಬೆಂಗಳೂರು: ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು ಎಂದು ಕೇಳಿಕೊಂಡಿದ್ದಾರೆ.
Advertisement
ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು.
ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ
— B.S.Yediyurappa (@BSYBJP) July 21, 2021
Advertisement
ಪಕ್ಷ ನನಗೆ ಮಾತೃ ಸಮಾನ, ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ ಎಂದು ಟ್ವೀಟ್ ಮಾಡಿದ್ದಾರೆ.
Advertisement
Advertisement
ಟ್ವೀಟ್ ಮಾಡಿದ್ದು ಯಾಕೆ?
ಯಡಿಯೂರಪ್ಪ ರಾಜೀನಾಮೆ ನೀಡುವುದು ಪಕ್ಕಾ ಆಗುತ್ತಿರುವಂತೆಯೇ ಅವರ ಪರವಾಗಿ ಪ್ರಬಲ ಲಾಬಿ ಶುರುವಾಗಿದೆ. ಸ್ವಾಮೀಜಿಗಳು ಯಡಿಯೂರಪ್ಪ ಪರವಾಗಿ ಹೈಕಮಾಂಡ್ ಮೇಲೆ ಒತ್ತಡ ತಂತ್ರ ಅನುಸರಿಸುತ್ತಿದ್ದಾರೆ. ಇದನ್ನೂ ಓದಿ : ಯಡಿಯೂರಪ್ಪ ಇಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಸುಬ್ರಮಣಿಯನ್ ಸ್ವಾಮಿ
ರಾಜೀನಾಮೆ ನೀಡಬೇಡಿ ಎಂದು ಸಿಎಂ ಮೇಲೆ ಬೆಂಬಲಿಗ ನಾಯಕರು ಒತ್ತಡ ಹೇರುತ್ತಿದ್ದಾರೆ. ಆದರೆ ಸಿಎಂ ಯಡಿಯೂರಪ್ಪ ಮಾತ್ರ ರಾಜೀನಾಮೆ ನೀಡುವ ತಮ್ಮ ನಿರ್ಧಾರಕ್ಕೆ ಕಟಿಬದ್ಧರಾಗಿದ್ದಾರೆ. ಹೈಕಮಾಂಡ್ಗೆ ಕೊಟ್ಟ ಮಾತಿನಂತೆ, ಮೋದಿ-ಷಾ ನೀಡಿದ ಸೂಚನೆಯಂತೆ ಬಿಎಸ್ವೈ ನಡೆದುಕೊಳ್ಳಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಪಬ್ಲಿಕ್ ಟಿವಿಗೆ ಸಿಕ್ಕ ಉನ್ನತ ಮೂಲಗಳ ಮಾಹಿತಿ ಪ್ರಕಾರ, ಸರ್ಕಾರಕ್ಕೆ 2 ವರ್ಷ ತುಂಬಿದ ದಿನವೇ ಅಂದರೆ ಜುಲೈ 26ರಂದೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು ಸಿದ್ದಗಂಗಾ ಶ್ರೀಗಳ ನೇತೃತ್ವದ ಸ್ವಾಮೀಜಿಗಳ ನಿಯೋಗದ ಜೊತೆ ಯಡಿಯೂರಪ್ಪ ಮಾತಾಡುತ್ತಾ ರಾಜೀನಾಮೆ ಸುಳಿವು ನೀಡಿದ್ದಾರೆ. ಇದಕ್ಕೆ ಪೂರಕವಾಗಿ ವೇದಿಕೆಯೂ ರೆಡಿ ಆಗುತ್ತಿದೆ. ಇನ್ನು ಒಂದೆರಡು ದಿನಗಳಲ್ಲಿ ರಾಜ್ಯಕ್ಕೆ ಹೈಕಮಾಂಡ್ ಪರವಾಗಿ ವೀಕ್ಷಕರು ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.