ಶಿವಮೊಗ್ಗ: ಡೆತ್ ನೋಟ್ ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಕೆಳದಿ ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಗಣೇಶ್ (22) ಎಂದು ಗುರುತಿಸಲಾಗಿದೆ. ಕೆಳದಿ ಗ್ರಾಮದ ನಿವಾಸಿ ಸುಬ್ರಹ್ಮಣ್ಯ ಅವರಿಗೆ ಐವರು ಹೆಣ್ಣು ಮಕ್ಕಳಿದ್ದು, ಕೊನೆಯ ಪುತ್ರ ಗಣೇಶ್ ಉಡುಪಿಯಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ಲಾಕ್ಡೌನ್ ನಿಂದ ಕಾಲೇಜು ರಜೆ ಇದ್ದ ಹಿನ್ನೆಲೆಯಲ್ಲಿ ತನ್ನ ಸ್ವಗ್ರಾಮಕ್ಕೆ ಮರಳಿದ್ದ.
Advertisement
Advertisement
ನನ್ನ ಸಾವಿಗೆ ನಾನೇ ಕಾರಣ ಎಂದು ಗಣೇಶ್ ಡೆತ್ ನೋಟ್ ಬರೆದಿಟ್ಟು ತನ್ನ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತು ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.