ತಿರುವನಂತಪುರಂ: ಕೇರಳದ ಕೋಯಿಕ್ಕೋಡ್ ಕರಿಪುರ ವಿಮಾನ ನಿಲ್ದಾಣದಲ್ಲಿ ನಡೆದ ದುರಂತದಲ್ಲಿ ಬದುಕುಳಿದ ಪ್ರಯಾಣಿಕರು ಪೈಲಟ್ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
Advertisement
ಶುಕ್ರವಾರ ರಾತ್ರಿ ನಡೆದ ಈ ದುರ್ಘಟನೆಯಲ್ಲಿ ಪೈಲಟ್ ಸಮಯ ಪ್ರಜ್ಞೆಯಿಂದ ನಮ್ಮ ಜೀವಗಳನ್ನು ಕಾಪಾಡಿದರು. ವಿಮಾನ ಅಪಘಾತಕ್ಕೀಡಾಗುತ್ತಿದ್ದಂತೆಯೇ ಆಗುವ ಅನಾಹುತ ತಪ್ಪಿಸಿ ನಮ್ಮನ್ನು ಉಳಿಸುವ ಮೂಲಕ ತಮ್ಮ ಪ್ರಾಣ ತ್ಯಾಗ ಮಾಡಿದರು ಎಂದು ಏರ್ ಇಂಡಿಯಾ ಪ್ರಯಾಣಿಕರು ಪೈಲಟ್ ಅನ್ನು ಶ್ಲಾಫಿಸಿದರು.
Advertisement
Kerala: Rescue operations at the site have been completed & injured have been shifted to hospitals in Malappuram & Kozhikode; visuals from Kozhikode Medical College.
Directorate General of Civil Aviation says death toll in the flight crash landing incident at #Kozhikode is 16. pic.twitter.com/XzHaYSh528
— ANI (@ANI) August 7, 2020
Advertisement
ಧೈರ್ಯಶಾಲಿ ಪೈಲಟ್ ಹಾಗೂ ಸ್ಥಳೀಯ ನಿವಾಸಿಗಳು ನಡೆಯುತ್ತಿದ್ದ ಭಾರೀ ದುರಂತವನ್ನು ತಪ್ಪಿಸಿದ್ದಾರೆ. ವಿಮಾನ ಅಪಘಾತಕ್ಕೀಡಾದ ಕೂಡಲೇ ಜನರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ದುರಂತದಲ್ಲಿ ಬದುಕುಳಿದವರು ತಿಳಿಸಿದ್ದಾರೆ. ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ಇಬ್ಭಾಗವಾದ್ರೂ ಬದುಕುಳಿದ ಪುಟ್ಟ ಕಂದಮ್ಮ
Advertisement
ಭಾರೀ ಮಳೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಹವಾಮಾನ ಕೆಟ್ಟದಾಗಿದೆ ಎಂದು ಪೈಲಟ್ ವಿಮಾನವನ್ನು ಇಳಿಸುವ ಮೊದಲೇ ಎಚ್ಚರಿಕೆ ನೀಡಿದ್ದರು. ಅಲ್ಲದೆ ಎರಡು ಬಾರಿ ಸುರಕ್ಷಿತವಾಗಿ ವಿಮಾನವನ್ನು ಇಳಿಸಲು ಪ್ರಯತ್ನಿಸಿದರೂ ನಿಯಂತ್ರಣ ಕಳೆದುಕೊಂಡರು. ಪರಿಣಾಮ ರನ್ ವೇ ಯಿಂದ ಜಾರಿ 33 ಅಡಿ ಕಂದಕಕ್ಕೆ ಜಾರಿ ಎರಡು ಭಾಗವಾಯಿತು ಎಂದು ದುರಂತದಲ್ಲಿ ಸಣ್ಣಪುಟ್ಟ ಗಾಯಗೊಂಡವರು ತಿಳಿಸಿದರು.
Death toll in Kerala plane crash rises to 17; 2 pilots dead, all 4 crew members safe: Air India Express
Read @ANI Story | https://t.co/afFVrCeQxe pic.twitter.com/nNQINNR0Ul
— ANI Digital (@ani_digital) August 8, 2020
ಘಟನೆಯಲ್ಲಿ ಇಬ್ಬರು ಪೈಲಟ್ ಸೇರಿ ಕನಿಷ್ಠ 20 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಪ್ರಯಾಣಿಕರೆಲ್ಲರೂ ಕೊರೊನಾ ವೈರಸ್ನಿಂದಾಗಿ ದುಬೈನಲ್ಲಿ ಸಿಲುಕಿದವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ಹೊತ್ತು ಏರ್ ಇಂಡಿಯಾ ವಿಮಾನ ಕರಿಪುರ ವಿಮಾನ ನಿಲ್ದಾಣ ತಲುಪುತ್ತಿದ್ದಂತೆಯೇ ರನ್ ವೇಯಿಂದ ಜಾರಿ 33 ಅಡಿ ಕಂದಕಕ್ಕೆ ಬಿದ್ದು ಗೋಡೆಗೆ ಡಿಕ್ಕಿ ಹೊಡೆದು ಇಬ್ಭಾಗವಾಗಿದೆ.
1981ರಲ್ಲಿ ವಾಯಪಡೆಗೆ ಸೇರಿದ್ದ ಪೈಲಟ್ ದೀಪಕ್ ವಸಂತ್ ಸಾಠೆ(59) 22 ವರ್ಷಗಳ ಕಾಲ ವಾಯುಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಬೆಂಗಳೂರಿನ ಎಚ್ಎಎಲ್ನಲ್ಲಿ ಇರುವ ಏರ್ ಏರ್ ಫೋರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ನೀಡುತ್ತಿದ್ದರು. ಸ್ಕ್ವಾಡ್ರನ್ ಲೀಡರ್ ಆಗಿ ನಿವೃತ್ತಿ ಪಡೆದ ಬಳಿಕ ನಾಗರಿಕ ವಿಮಾನ ಸೇವೆಗೆ ಸೇರ್ಪಡೆಯಾಗಿದ್ದರು. ಇದನ್ನೂ ಓದಿ: ಯುದ್ಧವಿಮಾನವನ್ನು ಹಾರಿಸಿದ್ದ ಪೈಲಟ್ ಸಾಠೆ 2 ಬಾರಿ ಲ್ಯಾಂಡಿಗ್ಗೆ ಪ್ರಯತ್ನಿಸಿದ್ರು
Kerala: Wreckage of #AirIndiaExpress flight that crash-landed at Kozhikode International Airport in Karipur yesterday.
17 people, including two pilots, have lost their lives in the incident. pic.twitter.com/UUWTjAlTgZ
— ANI (@ANI) August 8, 2020
ಸುತ್ತಲೂ ಆಳ ಕಣಿವೆ ಇದ್ದು, ಬೆಟ್ಟದ ತುದಿಯಲ್ಲಿ ರನ್ ವೇ ಇರುವ ನಿಲ್ದಾಣಗಳನ್ನು ಟೇಬಲ್ ಟಾಪ್ ವಿಮಾನ ನಿಲ್ದಾಣ ಎಂದು ಗುರುತಿಸಲಾಗುತ್ತದೆ. 2010ರಲ್ಲಿ ಮಂಗಳೂರಿನಲ್ಲಿ ಕೂಡ ಇದೇ ರೀತಿ ವಿಮಾನ ದುರಂತ ಸಂಭವಿಸಿದ 158 ಮಂದಿ ಮೃತಪಟ್ಟಿದ್ದರು. ಈ ಮೂಲಕ ಇದೀಗ ಟೇಬಲ್ ಟಾಪ್ ವಿಮಾನ ನಿಲ್ದಾಣದಲ್ಲಿ ನಡೆದ ಎರಡನೇ ದುರಂತ ಇದಾಗಿದೆ.
#WATCH Latest visuals from Kozhikode International Airport in Karipur, Kerala where an #AirIndiaExpress flight crash-landed yesterday.
18 people, including two pilots, have lost their lives in the incident. pic.twitter.com/r1YRiIkbrM
— ANI (@ANI) August 8, 2020