ಕೋಲಾರ: ಸಂಸದ ಡಿ.ಕೆ.ಸುರೇಶ್ ಅವರ ಕೇಸರಿ ರಕ್ತ ಹೇಳಿಕೆಗೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ.ಸುಧಾಕರ್ ಟಾಂಗ್ ನೀಡಿದ್ದು, ನಮ್ಮಲ್ಲಿರುವುದು ಕೆಂಪು ಹಾಗೂ ಬಿಳಿ ರಕ್ತ ಕಣಗಳು ಎಂದಿದ್ದಾರೆ.
Advertisement
ನಗರದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಸುರೇಶ್ ಕೇಸರಿ ರಕ್ತ ಹೇಳಿಕೆ ವಿಚಾರಕ್ಕೆ ತಿರುಗೇಟು ನೀಡಿ, ಅವರಿಗೆ ಬಯಾಲಜಿ ಪುಸ್ತಕ ಕೊಡಿಸುತ್ತೇನೆ ನೋಡಿಕೊಳ್ಳಲಿ. ನನಗೆ ಗೊತ್ತಿರೋದು ಬಿಳಿ ಹಾಗೂ ಕೆಂಪು ರಕ್ತ ಕಣ ಅಷ್ಟೆ ಕೇಸರಿ ರಕ್ತ ಕಣ ಇರೋದು ನನಗೆ ಗೊತ್ತಿಲ್ಲ. ಆರ್.ಆರ್.ನಗರದಲ್ಲಿ ವಿಷಯಾಧಾರಿತ ಚರ್ಚೆ ಬಿಟ್ಟು ವೈಯಕ್ತಿಕ ಟೀಕೆ ಮಾಡುತ್ತಿದ್ದಾರೆ. ನಾನು ವೈಯಕ್ತಿಕ ಟೀಕೆಗಳಿಗೆ ಉತ್ತರ ನೀಡುವುದಿಲ್ಲ. ಇನ್ನು ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. 6 ಸ್ಥಾನಗಳು ಖಾಲಿ ಇರುವುದುರಿಂದ ಆದಷ್ಟು ಶೀಘ್ರವಾಗಿ ಆಗುತ್ತದೆ ಎಂದು ತಿಳಿಸಿದರು.
Advertisement
Advertisement
ಕಾರ್, ಬೈಕ್ನಲ್ಲಿ ಒಬ್ಬರೇ ಇದ್ದರೂ ಮಾಸ್ಕ್ ಧರಿಸುವ ನಿಯಮವನ್ನು ತಜ್ಞರ ಸಲಹೆಯಂತೆ ಜಾರಿಗೆ ತರಲಾಗಿದೆ. ಕಾರ್ನಲ್ಲಿ ಒಬ್ಬರೇ ಹೋಗುವಾಗ ಮಾಸ್ಕ್ ಕಡ್ಡಾಯವಲ್ಲ, ಆದರೆ ಬೈಕ್ ನಲ್ಲಿ ಹೋಗುವಾಗ ಮಾಸ್ಕ್ ಹಾಕಿಕೊಳ್ಳಬೇಕು ಇದು ತಜ್ಞರ ಅಭಿಪ್ರಾಯವಾಗಿದೆ. ಕೊರೊನಾ ವಾರಿಯರ್ಸ್ ಸುಮಾರು 8 ಗಂಟೆಗಳ ಕಾಲ ಪಿಪಿಇ ಕಿಟ್ಗಳನ್ನು ಹಾಕಿಕೊಂಡು ಕೆಲಸ ಮಾಡುತ್ತಾರೆ. ನಾವು ಮಾಸ್ಕ್ ಹಾಕುವುದರಲ್ಲಿ ತಪ್ಪಿಲ್ಲ, ಸರ್ಕಾರ ಆರೋಗ್ಯದ ದೃಷ್ಟಿಯಿಂದ ಮಾಸ್ಕ್ ಧರಿಸವುದು ಕಡ್ಡಾಯ ಮಾಡಿದೆ ಎಂದು ತಿಳಿಸಿದರು.