ಚಿಕ್ಕಮಗಳೂರು: ವೈದ್ಯರ ಸಲಹೆಯಂತೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಾನು ಆರೋಗ್ಯವಾಗಿದ್ದೇನೆ ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ರಂಭಾಪುರಿ ಪೀಠದ ಶ್ರೀ ವೀರ ಸೋಮೇಶ್ವರ ಶಿವಾಚಾರ್ಯ ಜಗದ್ಗುರುಗಳು ಪ್ರತಿಕ್ರಿಯೆ ನೀಡಿದ್ದಾರೆ.
ನನಗೆ ಕೊರೊನಾ ಸೋಂಕು ತಗುಲಿದೆ ಎಂದು ಗೊತ್ತಾಗಿ ನಾಡಿನಾದ್ಯಂತ ಭಕ್ತರು ಪೂಜೆ, ಪ್ರಾರ್ಥನೆ ಮಾಡುತ್ತಿದ್ದಾರೆ. ಕೊರೊನಾ ಜೀವಕ್ಕೆ ತೊಂದರೆ ಕೊಡುವ ಕಾಯಿಲೆಯಲ್ಲ, ನಾನು ಆರೋಗ್ಯವಾಗಿದ್ದೇನೆ ವೈದ್ಯರ ಸಲಹೆಯಂತೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಅಷ್ಟೇ ಎಂದು ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.
Advertisement
Advertisement
ನಾಡಿನಾದ್ಯಂತ ಭಕ್ತರು ತೋರುತ್ತಿರುವ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ. ಇನ್ನು ಎರಡು ದಿನದ ನಂತರ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರಿನ ರಂಭಾಪುರಿ ಮಠಕ್ಕೆ ಹಿಂದಿರುಗಲಿದ್ದೇನೆ. ನನಗೆ ಪೀಠದ ಮೂಲ ಪಂಚಚಾರ್ಯರ ಅನುಗ್ರಹ, ಶಿವನ ಆಶೀರ್ವಾದವಿದೆ. ಅನಾರೋಗ್ಯದಿಂದ ಶೀಘ್ರವೇ ಮುಕ್ತನಾಗಿ ಭಕ್ತರಿಗೆ ದರ್ಶನ ನೀಡಲಿದ್ದೇನೆ ಎಂದು ವಿಡಿಯೋ ಸಂದೇಶದಲ್ಲಿ ರಂಭಾಪುರಿ ಶ್ರೀಗಳು ತಿಳಿಸಿದ್ದಾರೆ.