ನವದೆಹಲಿ: ಬಿಜೆಪಿ ಸೇರುತ್ತಾರೆ ಎಂಬ ಸುದ್ದಿಗೆ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣವರ್ ಸ್ಪಷ್ಟನೆ ಕೊಟ್ಟಿದ್ದಾರೆ.
Advertisement
ನಾನು ಭರವಸೆ ಎಂಬ ಪುಸ್ತಕವನ್ನು ಬರೆಯುತ್ತಿದ್ದು, ಇದರ ಪ್ರಯುಕ್ತ ಇತ್ತೀಚೆಗೆ ನನ್ನ ಇತ್ತೀಚಿನ ರಜೆ ದಿನಗಳಲ್ಲಿ ನನ್ನ ಹಳೆಯ ಸ್ನೇಹಿತರ ಮನೆಗಳನ್ನು ದೇವಸ್ಥಾನಗಳನ್ನು, ಶ್ರೀ ಮಠಗಳನ್ನು ಭೇಟಿಯಾಗಿ ಮಾಹಿತಿ ಕಲೆಹಾಕುತ್ತಿದ್ದೇನೆ. ಆ ಸಂದರ್ಭದ ವಿವಿಧ ಫೋಟೋಗಳನ್ನು ಉಪಯೋಗಿಸಿಕೊಂಡು ಕೆಲವು ಮಾಧ್ಯಮಗಳು ವಿಶೇಷವಾದ ಅರ್ಥವನ್ನು ಕಲ್ಪಸಿ ಬಿತ್ತರಿಸುತ್ತಿವೆ. ಈ ವಿಚಾರ ನನ್ನ ಗಮನಕ್ಕೆ ಬಂದಿದೆ. ಈ ಸುದ್ದಿಗಳು ಸತ್ಯಕ್ಕೆ ದೂರವಾಗಿದ್ದು, ಅದಕ್ಕೆ ಯಾವುದೇ ವಿಶೇಷತೆ ಮತ್ತು ಅಪಾರ್ಥವನ್ನು ಕಲ್ಪಿಸಬೇಡಿ. ನಾನು ರಾಜಕೀಯ ಸೇರುವುದು ಸತ್ಯಕ್ಕೆ ದೂರವಾದ ಸಂಗತಿ ಎಂಬುದನ್ನು ಈ ಮೂಲಕವಾಗಿ ಸ್ಪಷ್ಟಪಡಿಸುತ್ತೇನೆ ಎಂದು ಹೇಳಿ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಬಿಜೆಪಿ ಸೇರುತ್ತಾರಾ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್?
Advertisement
ರಾಜ್ಯದಲ್ಲಿ ಸೂಪರ್ ಕಾಪ್ ಎಂದೇ ಫೇಮಸ್ ಆಗಿರುವ ರವಿ ಡಿ ಚನ್ನಣ್ಣನವರ್ ಅವರನ್ನು ಬಿಜೆಪಿ ಸೆಳೆಯಲು ಮುಂದಾಗಿದೆಯಂತೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು.
Advertisement
Advertisement
ಕಳೆದ ಮಂಗಳವಾರ ದೆಹಲಿಯಲ್ಲಿ ರವಿ ಚನ್ನಣ್ಣನವರ್ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿದ್ದರು. ಕೊಳ್ಳೇಗಾಲದ ಶಾಸಕ ಎನ್.ಮಹೇಶ್ ಬಿಜೆಪಿ ಸೇರ್ಪಡೆಗೂ ಮುನ್ನ ಸಂತೋಷ್ ಅವರನ್ನು ಭೇಟಿಯಾಗಿದ್ದರು. ಇದೇ ಸಂದರ್ಭದಲ್ಲಿ ರವಿ ಚನ್ನಣ್ಣನವರ್ ಕೂಡಾ ಇದ್ದರು ಎಂದು ಮೂಲಗಳು ಹೇಳಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮ್ಮುಖದಲ್ಲಿ ಸಭೆ ಕೂಡಾ ನಡೆದಿದೆ ಎಂದು ಹೇಳಲಾಗುತ್ತಿತ್ತು