ಟೋಕಿಯೋ: ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದು ಕೊಟ್ಟ ವೇಟ್ಲಿಫ್ಟರ್ ಮೀರಾಬಾಯಿ ಚಾನು ಜುಲೈ 26ಕ್ಕೆ ಭಾರತಕ್ಕೆ ಹಿಂದಿರುಗಲಿದ್ದಾರೆ.
Advertisement
ಟೋಕಿಯೋ ಒಲಿಂಪಿಕ್ಸ್ನಲ್ಲಿ 49 ಕೆ.ಜಿ ವಿಭಾಗದ ವೇಟ್ಲಿಫ್ಟಿಂಗ್ನಲ್ಲಿ 26 ವರ್ಷದ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದರು. ಈ ಮೂಲಕ ಯಶಸ್ವಿಯಾಗಿ ತನ್ನ ಸ್ಪರ್ಧೆ ಮುಗಿಸಿರುವ ಮೀರಾಬಾಯಿ ಚಾನು ನಾಳೆ ನವದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ ವೇಳೆಗೆ ಬಂದಿಳಿಯಲಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಬೆಳ್ಳಿ ಪದಕ ಗೆದ್ದ ಮೀರಾಬಾಯಿಗೆ ಡೊಮಿನೊಸ್ ಕಡೆಯಿಂದ ಜೀವನ ಪೂರ್ತಿ ಪಿಜ್ಜಾ
Advertisement
Advertisement
49 ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದು ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಮೊದಲ ಪದಕ ಗಳಿಸಿ ಕೊಟ್ಟ ಕೀರ್ತಿಗೆ ಭಾಜನರಾಗಿದ್ದಾರೆ. ಚೀನಾದ ಹೊ ಜಿಹೂಹು ಒಟ್ಟು 210 ಕೆಜಿ (94+116 ಕೆಜಿ) ಭಾರ ಎತ್ತಿ ಚಿನ್ನದ ಪದಕ ಬೇಟೆಯಾಡಿದರೆ, ಮೀರಾಬಾಯಿ ಚಾನು 202 ಕೆಜಿ (87+115 ಕೆಜಿ) ಭಾರ ಎತ್ತಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು. ಇಂಡೋನೇಷ್ಯಾದ ಐಸಾಹ್ ವಿಂಡಿ ಕಾಂಟಿಕಾ ವಿಂಡಿ 194 ಕೆಜಿ (84+110ಕೆಜಿ) ಕಂಚಿನ ಪದಕ ಪಡೆದರು.
Advertisement
84 ಕೆಜಿ ಮತ್ತು 87 ಕೆಜಿ ಭಾರವನ್ನು ಯಶಸ್ವಿಯಾಗಿ ಎತ್ತಿದ ಮಿರಾಬಾಯ್ ಚಾನು 89 ಕೆಜಿ ಭಾರ ಎತ್ತುವಲ್ಲಿ ವಿಫಲರಾದರು. ಆದರೆ ಚೀನಾದ ಸ್ಪರ್ಧಿ ಜಿಹೂಹು 94 ಕೆಜಿ ಭಾರ ಎತ್ತಿ ಒಲಿಂಪಿಕ್ ದಾಖಲೆ ಬರೆದರು. ಇದು ಒಲಿಂಪಿಕ್ಸ್ನಲ್ಲಿ ಭಾರ ಎತ್ತುವ ಸ್ಪರ್ಧೆಯಲ್ಲಿ ಭಾರತದ ಶ್ರೇಷ್ಠ ಸಾಧನೆಯಾಗಿದೆ. ಈ ಹಿಂದೆ ಸಿಡ್ನಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕ ಗೆದ್ದು ಸಾಧನೆ ಮಾಡಿದ್ದರು. 69 ಕೆಜಿ ವಿಭಾಗದಲ್ಲಿ ಕರ್ಣಂ ಮಲ್ಲೇಶ್ವರಿ ಅವರು ಕಂಚಿನ ಪದಕ ಗಳಿಸಿದ್ದರು.