ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ‘ಫ್ಯಾಂಟಮ್’ ಸಿನಿಮಾದ ಚಿತ್ರೀಕರಣ ಈಗಾಗಲೇ ಆರಂಭವಾಗಿದ್ದು, ಚಿತ್ರತಂಡ ಸಣ್ಣ ಸಣ್ಣ ವಿಡಿಯೋ ರಿಲೀಸ್ ಮಾಡುವ ಮೂಲಕ ಸದ್ದು ಮಾಡುತ್ತಿದೆ. ಈ ನಡುವೆ ಚಿತ್ರತಂಡ ಅಭಿಮಾನಿಗಳಿಗೆ ಸರ್ಪ್ರೈಸ್ ಕೊಡಲು ಮುಂದಾಗಿದೆ.
‘ಫ್ಯಾಂಟಮ್’ ಚಿತ್ರತಂಡ ಸಿನಿಮಾದ ಫಸ್ಟ್ಲುಕ್ ರಿಲೀಸ್ ಮಾಡಲು ಮುಂದಾಗಿದೆ. ಸೋಮವಾರ ಅಂದರೆ ನಾಳೆ ಸುದೀಪ್ ಅವರ ಫಸ್ಟ್ಲುಕ್ ರಿಲೀಸ್ ಆಗಲಿದೆ. ಈ ಬಗ್ಗೆ ಸಿನಿಮಾ ನಿರ್ದೇಶಕ ಅನೂಪ್ ಭಂಡಾರಿ ಅವರು ಟ್ವಿಟ್ಟರಿನಲ್ಲಿ ವಿಡಿಯೋವೊಂದನ್ನು ಅಪ್ಲೋಡ್ ಮಾಡುವ ಮೂಲಕ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
Advertisement
Advertisement
“ನಮ್ಮ ಪ್ಯಾಂಟಮ್ ಸಿನಿಮಾದ ಪ್ರತಿಯೊಂದು ಪಾತ್ರವನ್ನು ಪೋಸ್ಟರ್ ಮೂಲಕ ತಿಳಿಸಲು ಮುಂದಾಗಿದ್ದೇವೆ. ಅದೇ ರೀತಿ ಮೊದಲು ಚಿತ್ರದ ನಾಯಕ ವಿಕ್ರಾಂತ್ ರೋಣ ಅವರ ಮೊದಲ ಪೋಸ್ಟರ್ ರಿಲೀಸ್ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ. ಜೊತೆಗೆ ಸೋಮವಾರ ಬೆಳಗ್ಗೆ 10 ಗಂಟೆಗೆ ಸುದೀಪ್ ಅವರ ಫಸ್ಟ್ಲುಕ್ ರಿಲೀಸ್ ಆಗಲಿದೆ. ಈ ಮೂಲಕ ‘ಫ್ಯಾಂಟಮ್’ ಸಿನಿಮಾದಲ್ಲಿ ಸುದೀಪ್ ಯಾವ ಲುಕ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ.
Advertisement
Advertisement
ಕೊರೊನಾ ಲಾಕ್ಡೌನ್ನಿಂದ ಚಿತ್ರರಂಗ ಸ್ತಬ್ಧವಾಗಿತ್ತು. ಆದರೆ ಇತ್ತೀಚೆಗೆ ಆಂಧ್ರಪ್ರದೇಶದಲ್ಲಿ ಸಿನಿಮಾ ಶೂಟಿಂಗ್ಗೆ ಅನುಮತಿ ನೀಡಲಾಗಿತ್ತು. ಹೀಗಾಗಿ ಸುದೀಪ್ ನಟನೆಯ ಫ್ಯಾಂಟಮ್ ಚಿತ್ರತಂಡ ಚಿತ್ರೀಕರಣಕ್ಕಾಗಿ ಹೈದರಾಬಾದಿಗೆ ಹೋಗಿದ್ದು, ಅಲ್ಲಿ ಕಾಡಿನ ಅದ್ಧೂರಿ ಸೆಟ್ ಹಾಕಿ ಸಿನಿಮಾದ ಶೂಟಿಂಗ್ ಮಾಡುತ್ತಿದ್ದಾರೆ.
The ‘First’ look poster of @kicchasudeep sir as Vikranth Rona will be unveiled tomorrow (Aug10) at 10am. #Phantom #VikranthRonaFirstLook pic.twitter.com/la0f0NOWB6
— Anup Bhandari (@anupsbhandari) August 9, 2020
ಮೊದಲಿಗೆ ‘ಫ್ಯಾಂಟಮ್’ ಚಿತ್ರತಂಡ ಒಂದು ಚಿಕ್ಕ ವಿಡಿಯೋವನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಕಿಚ್ಚ ಸುದೀಪ್ ಮತ್ತು ಒಂದು ಚಿಕ್ಕ ಮಗು ಮಾತ್ರ ಪ್ರಮುಖವಾಗಿ ಕಾಣಿಸಿಕೊಂಡಿತ್ತು. ಈ ದೃಶ್ಯದಲ್ಲಿನ ಹಿನ್ನೆಲೆ ಸಂಗೀತಕ್ಕೆ ಅಭಿಮಾನಿಗಳು ಫಿದಾ ಆಗಿದ್ದರು. ಮತ್ತೆ ಕಿಚ್ಚ ಸುದೀಪ್ ಅವರು ತಮ್ಮ ಟ್ವಿಟ್ಟರಿನಲ್ಲಿ ಇನ್ನೊಂದು ದೃಶ್ಯವನ್ನು ಹಂಚಿಕೊಂಡಿದ್ದರು. ಅದರಲ್ಲಿ ಬೈಕಿನಲ್ಲಿ ಬರುವ ಕಿಚ್ಚ ನಂತರ ಟಾರ್ಚ್ ಹಿಡಿದು ಏನನ್ನೋ ಹುಡುಕುತ್ತಾ ಕಾಡಿನೊಳಗೆ ಹೋಗುವುದನ್ನು ನಾವು ಕಾಣಬಹುದು. ಈ ದೃಶ್ಯದ ಹಿನ್ನೆಲೆ ಸಂಗೀತ ಕೂಡ ಸಖತ್ ಕ್ಯಾಚಿಯಾಗಿದೆ.