ಬೆಂಗಳೂರು: ರಾಜ್ಯದಲ್ಲಿ ಸೋಮವಾರದಿಂದ ಲಾಕ್ಡೌನ್ ತೆರವು ಹಿನ್ನೆಲೆ ರಾಜ್ಯದ ಗಡಿ ಅತ್ತಿಬೆಲೆ ಮೂಲಕ ಸಾಲು-ಸಾಲು ವಾಹನಗಳ ಮೂಲಕ ಜನರು ಬೆಂಗಳೂರಿನತ್ತ ಬರುತ್ತಿದ್ದಾರೆ.
Advertisement
ನಾಳೆಯಿಂದ ಅನ್ಲಾಕ್ ಆಗಿರುವುದರಿಂದ ವಲಸೆ ಹೋಗಿದ್ದ ಕಾರ್ಮಿಕರು ಕರ್ನಾಟಕ- ತಮಿಳುನಾಡು ಗಡಿ ಅತ್ತಿಬೆಲೆಯಲ್ಲಿ ವಾಹನಗಳ ಮೂಲಕ ಮತ್ತೆ ಮರಳಿ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಜನರು ಕಾರುಗಳಲ್ಲಿ ಹಾಗೂ ದ್ವಿಚಕ್ರ ವಾಹನಗಳಲ್ಲಿ ತಮ್ಮ ಕುಟುಂಬ ಸಮೇತರಾಗಿ ಲಗೇಜುಗಳೊಂದಿಗೆ ಒಂದುವರೆ ತಿಂಗಳ ಬಳಿಕ ತಮ್ಮ ನಿವಾಸಗಳಿಗೆ ಆಗಮಿಸುತ್ತಿದ್ದಾರೆ.
Advertisement
Advertisement
ಅತ್ತಿಬೆಲೆ ಚೆಕ್ ಪೋಸ್ಟ್ ನಲ್ಲಿ ಪೊಲೀಸ್ ಪೇದೆಯೊಬ್ಬರು ಹಾಗೂ ನಾಲ್ಕು ಜನ ಹೋಂ ಗಾರ್ಡ್ಗಳು, ಶಿಕ್ಷಕರು ಬೆಂಗಳೂರಿಗೆ ಬರುತ್ತಿದ್ದ ವಾಹನಗಳನ್ನು ತಪಾಸಣೆ ಮಾಡುತ್ತಿದ್ದರು. ಇದನ್ನು ಹೊರತುಪಡಿಸಿ ಚೆಕ್ ಪೋಸ್ಟ್ ಗೆ ನೇಮಕ ಮಾಡಿದ್ದ ರೆವಿನ್ಯೂ ಇಲಾಖೆ ಅಧಿಕಾರಿಗಳು ಸೇರಿದಂತೆ ಕೆಲ ಇಲಾಖೆಯ ಅಧಿಕಾರಿಗಳು ಹಾಜರಿ ಪುಸ್ತಕದಲ್ಲಿ ಸಹಿ ಮಾಡಿ, ಡ್ಯೂಟಿ ಮಾಡದೇ ನಿರ್ಲಕ್ಷ್ಯ ತೋರಿದ್ದಾರೆ. ಇದನ್ನೂ ಓದಿ: ನಾಳೆಯಿಂದ ದೆಹಲಿಯಲ್ಲಿ ಅನ್ಲಾಕ್ – ಹೋಟೆಲ್ಗಳಲ್ಲಿ ಶೇ.50, ಮಾಲ್ ಫುಲ್ ಓಪನ್
Advertisement
ಬೆಳಗ್ಗೆಯಿಂದ ಸಂಜೆಯವರೆಗೂ ಅತ್ತಿಬೆಲೆ ಚೆಕ್ ಪೋಸ್ಟ್ ಬಳಿ ಸರಿಯಾದ ಮಾರ್ಗಸೂಚಿ ನೀಡದ ಹಾಗೂ ಬೆರಳೆಣಿಕೆಯಷ್ಟು ಸಿಬ್ಬಂದಿಗಳ ನಿಯೋಜನೆಯಿಂದ ಯಾವುದೇ ಕಟ್ಟುನಿಟ್ಟಿನ ತಪಾಸಣೆ ಮಾಡದೇ ಇರುವುದು ಕಂಡು ಬಂತು. ಒಟ್ಟಿನಲ್ಲಿ ಕೊರೊನಾ ಲಾಕ್ಡೌನ್ ಹಿನ್ನೆಲೆ ಬೆಂಗಳೂರು ತೊರೆದಿದ್ದ ವಲಸೆ ಕಾರ್ಮಿಕರು ಮತ್ತೆ ಬೆಂಗಳೂರಿನತ್ತ ಮರಳಿ ಮುಖ ಮಾಡಿದ್ದು, ಮತ್ತಷ್ಟು ಕೊರೊನಾ ಸೋಂಕು ಹರಡುವ ಆತಂಕ ಹೆಚ್ಚಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮೊದಲ ಪ್ರಯತ್ನ- ಹುಬ್ಬಳ್ಳಿಯಲ್ಲಿ 2 ರೂ.ಗೆ ಸಿಗುತ್ತೆ ಸರ್ಜಿಕಲ್ ಮಾಸ್ಕ್!