-ಇಂದಿನಿಂದ ಉತ್ತರ ಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳು ಸಂಪೂರ್ಣ ಬಂದ್
ಕಾರವಾರ: ಕೋವಿಡ್ ಪ್ರಕರಣ ನಿರಂತರವಾಗಿ ಅಧಿಕವಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ಮೇರೆಗೆ ವಾರಾಂತ್ಯ ಅಂದರೆ ಮೇ 22ರ ಬೆಳಿಗ್ಗೆ 6 ಗಂಟೆಯಿಂದ ಮೇ 24ರ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಕಠಿಣ ಲಾಕ್ಡೌನ್ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ ಎಂ.ಪಿ.ರವರು ಆದೇಶ ಹೊರಡಿಸಿದ್ದಾರೆ.
Advertisement
ಉತ್ತರಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನಲೆಯಲ್ಲಿ ಇಂದಿನಿಂದ ನಾಲ್ಕು ತಾಲೂಕುಗಳು ಲಾಕ್ ಡೌನ್ ಮಾಡಲು ಸೂಚನೆ ನೀಡಲಾಗಿದೆ. ಸಿದ್ದಾಪುರ, ಶಿರಸಿ, ಯಲ್ಲಾಪುರ ಮತ್ತು ಮುಂಡಗೋಡು ಪಟ್ಟಣಗಳಲ್ಲಿ ಅತೀ ಹೆಚ್ಚು ಸೋಂಕು ಪತ್ತೆಯಾಗುತ್ತಿದ್ದು, ಈ ತಾಲೂಕುಗಳನ್ನು ಕಂಟೈನ್ಮೆಂಟ್ ವಲಯವಾಗಿ ಘೋಷಣೆ ಮಾಡಲಾಗಿದ್ದು, ಸಂಪೂರ್ಣ ಲಾಕ್ ಡೌನ್ ಮಾಡಲಾಗಿದೆ.
Advertisement
Advertisement
ಉಳಿದ ತಾಲೂಕುಗಳಲ್ಲಿ ಮೇ 22ರ ಬೆಳಿಗ್ಗೆ ಆರು ಗಂಟೆಯಿಂದ ಲಾಕ್ಡೌನ್ ಮಾಡಲಾಗುತ್ತಿದೆ. ಸದ್ಯ ಕಾರವಾರದ 17 ಪ್ರಮುಖ ರಸ್ತೆಗಳನ್ನು ಇಂದು ಸಂಪೂರ್ಣ ಬಂದ್ ಮಾಡಲಾಗಿದೆ. ಕಾರವಾರ, ಹಳಿಯಾಳ, ಯಲ್ಲಾಪುರ, ಶಿರಸಿ, ಸಿದ್ದಾಪುರ, ಮುಂಡಗೋಡು ತಾಲೂಕಿನಲ್ಲೂ ಸಂಪೂರ್ಣ ಬಂದ್ ಮಾಡಲಾಗಿದ್ದು, ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದಾರೆ.