ಬೆಂಗಳೂರು: ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಕೆಲ ಸ್ಪರ್ಧಾತ್ಮಕ ಪರೀಕ್ಷೆಗಳು ಮುಂದೂಡಿಕೆಯಾಗಿದ್ದವು. ಆದರೆ ನಿಗದಿಯಂತೆ ಕೆಪಿಎಸ್ಸಿ ಪರೀಕ್ಷೆ ನಡೆಯಲಿದೆ.
ಕೆಪಿಎಸ್ಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗ ಸ್ಪಷ್ಟನೆ ನೀಡಿದೆ. ಆದ್ದರಿಂದ ಕೆಪಿಎಸ್ಸಿ ಪರೀಕ್ಷೆ ಮಾರ್ಗಸೂಚಿಯನ್ನು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ.
Advertisement
Advertisement
ಜೊತೆಗೆ ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಮಾರ್ಗಸೂಚಿ ಫಾಲೋ ಮಾಡಲು ಸೂಚನೆ ನೀಡಿದೆ. ಎಸ್ಎಸ್ಎಲ್ಸಿ ಮತ್ತು ಪಿಯುಸಿ, ಸಿಇಟಿ ಮಾರ್ಗಸೂಚಿಗಳನ್ನೆ ಕೆಪಿಎಸ್ಸಿ ಪರೀಕ್ಷೆಗೂ ಮುಂದುವರಿಕೆ ಮಾಡಿದೆ. ಬಹುತೇಕ ಅದೇ ಮಾರ್ಗಸೂಚಿಯನ್ನು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ.
Advertisement
ಕೆಪಿಎಸ್ಸಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿ
* ಪರೀಕ್ಷೆಗೆ 3 ದಿನ ಮುಂಚೆ ಕಡ್ಡಾಯವಾಗಿ ಕೊಠಡಿ ಸ್ಯಾನಿಟೈಸ್ ಮಾಡಬೇಕು
* ಪ್ರತಿ ವಿದ್ಯಾರ್ಥಿಗಳು ಎರಡು ಗಂಟೆ ಮುಂಚೆ ಬಂದು ಪರೀಕ್ಷಾ ಕೇಂದ್ರದಲ್ಲಿ ತಮಗೆ ನೀಡಿದ ಕೊಠಡಿಯಲ್ಲಿ ಆಸೀನರಾಗಬೇಕು
* ಪ್ರತಿ ಕೇಂದ್ರದಲ್ಲಿ ಅಭ್ಯರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸ್, ಮಾಸ್ಕ್ ಕಡ್ಡಾಯ
* ಪರೀಕ್ಷೆಗೆ ಆಗಮಿಸೋವಾಗ, ಪರೀಕ್ಷೆ ಮುಗಿಸಿ ತೆರಳುವಾಗ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು
* ಪ್ರತಿ ಕೊಠಡಿಗೆ 24 ಅಭ್ಯರ್ಥಿಗಳು ಮಾತ್ರ ಕೂರಿಸಬೇಕು
Advertisement
* ಕೊಠಡಿಯಲ್ಲಿ ಅಭ್ಯರ್ಥಿಗಳ ಮಧ್ಯೆ ಸಾಮಾಜಿಕ ಅಂತರ ನಿಯಮ ಫಾಲೋ ಮಾಡಬೇಕು (ಕನಿಷ್ಠ 3 ಅಡಿ)
* ಕಂಟೈನ್ಮೆಂಟ್ ವಲಯದಿಂದ ಬರೋ ಅಭ್ಯರ್ಥಿಗಳಿಗೆ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ವ್ಯವಸ್ಥೆ ಮಾಡಬೇಕು
* ಪರೀಕ್ಷಾ ಕೆಲಸಕ್ಕೆ ಹಾಜರಾಗೋ ಸಿಬ್ಬಂದಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಬಾರದು
* ಅನ್ಯ ಕಾಯಿಲೆ ಇರೋ ಅಭ್ಯರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ವ್ಯವಸ್ಥೆ ಮಾಡಬೇಕು
* ಪರೀಕ್ಷೆ ಮುಗಿದ ಬಳಿಕ ಕೊಠಡಿ, ಡೆಸ್ಕ್, ಟೇಬಲ್ ಗಳನ್ನ ಸ್ಯಾನಿಟೈಸ್ ಮಾಡಬೇಕು
* ಪರೀಕ್ಷಾ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು
* ಪ್ರತಿ ಕೇಂದ್ರದಲ್ಲಿ ಆರೋಗ್ಯ ಸಿಬ್ಬಂದಿ ಇರುವಂತೆ ನೋಡಿಕೊಳ್ಳಬೇಕು
* ಪರೀಕ್ಷಾ ಕೇಂದ್ರದ ಶೌಚಾಯಲ ಶುಚಿತ್ವದಿಂದ ಇರುವಂತೆ ನೋಡಿಕೊಳ್ಳಬೇಕು
* ಕೊರೊನಾ ಸೋಂಕು ಇರೋ ಅಭ್ಯರ್ಥಿಗಳಿಗೆ ವಿಶೇಷ ಸ್ಥಳದಲ್ಲಿ, ವಿಶೇಷ ಕೊಠಡಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಪರೀಕ್ಷೆಗೆ ವ್ಯವಸ್ಥೆ ಮಾಡಬೇಕು.