ಬೆಂಗಳೂರು: ಸಿದ್ದರಾಮಯ್ಯ ಒಬ್ಬ ಮನೆ ಮುರುಕ ಎಂದು ಸರಣಿ ಟ್ವೀಟ್ ಮಾಡುವ ಮೂಲಕ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಹಾನಗಲ್ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ಪ್ರಚಾರ ನಡೆಸಿ ಭಾಷಣ ಮಾಡಿದ್ದ ಸಿದ್ದರಾಮಯ್ಯ ಅವರು, ‘ಪ್ರಧಾನಿ ಮೋದಿ ವಿರುದ್ಧ ಮಾತಾಡಿದರೆ ದೇಶದ್ರೋಹಿಯಂತೆ, ಯಾವನ್ರಿ ಇವನು ಪ್ರಧಾನ ಮಂತ್ರಿ? ಇಂಥವರೆಲ್ಲ ಪ್ರಧಾನಿ ಆಗೋಕೆ ಲಾಯಕ್ಕೇನ್ರಿ? ನನಗೆ ವೈಯಕ್ತಿಕವಾಗಿ ಯಾರ ಮೇಲೂ ಕೋಪ ಇಲ್ಲ. ಅವರು ಮಾಡ್ತಿರೋದನ್ನು ನೋಡಿ ಕೋಪ ಬರ್ತಿದೆ ಎಂದು ಗುಡುಗಿದ್ದರು.
Advertisement
Advertisement
ಈ ಕುರಿತಂತೆ ಬಿಜೆಪಿ ತನ್ನ ಅಧಿಕೃತ ಟ್ವೀಟರ್ನಲ್ಲಿ, ಮಾತೆತ್ತಿದರೆ ನಾನು ಹಳ್ಳಿಯವನು ಅಂತೀರ, ನಾನು ಮಾತನಾಡುವ ಶೈಲಿ ಹೀಗೆ ಅಂತೀರಾ, ನಿಮಗೆ ಗ್ರಾಮೀಣ ಸಂಸ್ಕೃತಿಯ ಅರಿವೇ ಇಲ್ಲ. ಅನ್ಯರನ್ನು ಪ್ರೀತಿ, ಬಹುವಚನ, ಆದರದಿಂದ ಮಾತನಾಡುವುದು ಗ್ರಾಮೀಣ ಸಂಸ್ಕೃತಿ. ಆದರೆ ನಿಮ್ಮಂಥ ‘ಮನೆಮುರುಕರು’ ಏಕವಚನ ಪ್ರಯೋಗವನ್ನೇ ಗ್ರಾಮೀಣ ಸಂಸ್ಕಾರ ಎಂದುಕೊಂಡಿದ್ದಾರೆ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಉದಾಸಿ, ಸಜ್ಜನರ್ ಸೇರಿ ಖಾಲಿ ಚೀಲಗಳನ್ನೂ ಬಿಡದಂತೆ ಸಕ್ಕರೆ ಕಾರ್ಖಾನೆ ನುಂಗಿದ್ದಾರೆ: ಸಿದ್ದರಾಮಯ್ಯ
Advertisement
ಸಿದ್ದರಾಮಯ್ಯನವರೇ,
ಮಾತೆತ್ತಿದರೆ ನಾನು ಹಳ್ಳಿಯವನು, ನಾನು ಮಾತನಾಡುವ ಶೈಲಿ ಹೀಗೆ ಎನ್ನುವ ನಿಮಗೆ ಗ್ರಾಮೀಣ ಸಂಸ್ಕೃತಿಯ ಅರಿವೇ ಇಲ್ಲ.
ಅನ್ಯರನ್ನು ಪ್ರೀತಿ, ಬಹುವಚನ, ಆದರದಿಂದ ಮಾತನಾಡುವುದು ಗ್ರಾಮೀಣ ಸಂಸ್ಕೃತಿ.
ಆದರೆ ನಿಮ್ಮಂಥ ‘ಮನೆಮುರುಕರು’ ಏಕವಚನ ಪ್ರಯೋಗವನ್ನೇ ಗ್ರಾಮೀಣ ಸಂಸ್ಕಾರ ಎಂದುಕೊಂಡಿದ್ದಾರೆ.#ಬುರುಡೆರಾಮಯ್ಯ
— BJP Karnataka (@BJP4Karnataka) October 17, 2021
Advertisement
ನಿರಂತರ 20 ವರ್ಷಗಳಿಂದ ಜನರಿಂದ ಆಯ್ಕೆಯಾಗಿ ಸಾಂವಿಧಾನಿಕ ಹುದ್ದೆಯಲ್ಲಿರುವ ಪ್ರಧಾನಿಯವರ ಕುರಿತು ಏಕವಚನದಲ್ಲಿ ಮಾತನಾಡುವ ಮುನ್ನ ಎಚ್ಚರವಹಿಸಿ. ನಿಮ್ಮ ದುರಹಂಕಾರ, ದಾಷ್ಟ್ರ್ಯಕ್ಕಾಗಿ ಮಾಜಿ ಮುಖ್ಯಮಂತ್ರಿಯೊಬ್ಬರಿಂದ ನಿಮ್ಮ ಸಾಂವಿಧಾನಿಕ ಹುದ್ದೆಯ ಮೇಲೆ ಪ್ರಯೋಗವಾದ ಪದವನ್ನು ಹೇಗೆ ಅರಗಿಸಿಕೊಂಡಿರಿ? ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹಾನಗಲ್ ಉಪಚುನಾವಣೆ- ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಜನರಿಂದ ನಿರಂತರ ಎರಡನೇ ಅವಧಿಗೆ ಆಯ್ಕೆಯಾದ ಪ್ರಧಾನ ಸೇವಕ ಅಲಂಕರಿಸಿರುವ ಪ್ರಧಾನಿ ಆ ಹುದ್ದೆಯ ಕುರಿತು ಕೀಳು ಮಟ್ಟದಲ್ಲಿ ಮಾತನಾಡಿ ನಿಮ್ಮ ಕೀಳು ಸಂಸ್ಕಾರ ಅನಾವರಣ ಮಾಡಿಕೊಂಡಿದ್ದೀರಿ. ಸರ್ಕಾರಿ ಬಂಗಲೆಯಲ್ಲೇ ಉಳಿಯಬೇಕೆಂಬ ಹಟಕ್ಕೆ ಪ್ರತಿಪಕ್ಷ ಸ್ಥಾನ ಪಟ್ಟು ಹಿಡಿದು ಉಳಿಸಿಕೊಂಡ ನಿಮ್ಮಂತವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಎಂದು ಪ್ರಶ್ನಿಸುವ ಮೂಲಕ ಕೆಂಡಕಾರಿದ್ದಾರೆ. ಇದನ್ನೂ ಓದಿ: ಗಾಂಧಿಯನ್ನೇ ಟೀಕಾಕಾರರು ಬಿಡ್ಲಿಲ್ಲ, ನನ್ನಂತ ಹುಲು ಮಾನವನನ್ನು ಬಿಡ್ತಾರಾ? – ಹೆಚ್ಡಿಕೆ ವಿರುದ್ಧ ಸಿದ್ದರಾಮಯ್ಯ ಟ್ವೀಟ್
ಜನರಿಂದ ನಿರಂತರ ಎರಡನೇ ಅವಧಿಗೆ ಆಯ್ಕೆಯಾದ ಪ್ರಧಾನ ಸೇವಕ ಅಲಂಕರಿಸಿರುವ ಪ್ರಧಾನಿ ಹುದ್ದೆಯ ಕುರಿತು ಕೀಳು ಮಟ್ಟದಲ್ಲಿ ಮಾತನಾಡಿ ನಿಮ್ಮ ಕೀಳು ಸಂಸ್ಕಾರ ಅನಾವರಣ ಮಾಡಿಕೊಂಡಿದ್ದೀರಿ.
ಸರ್ಕಾರಿ ಬಂಗಲೆಯಲ್ಲೇ ಉಳಿಯಬೇಕೆಂಬ ಹಟಕ್ಕೆ ಪ್ರತಿಪಕ್ಷ ಸ್ಥಾನ ಪಟ್ಟು ಹಿಡಿದು ಉಳಿಸಿಕೊಂಡ ನಿಮ್ಮಂತವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?#ಬುರುಡೆರಾಮಯ್ಯ
— BJP Karnataka (@BJP4Karnataka) October 17, 2021
ಅಪ್ಪ, ಅಜ್ಜಿ, ಮುತ್ತಾತ ಪ್ರಧಾನಿಯಾಗಿದ್ದರೆಂಬ ಕಾರಣಕ್ಕೆ ತಾನು ಪ್ರಧಾನಿಯಾಗಬೇಕೆಂದು ಓರ್ವ “ಹೆಬ್ಬೆಟ್ಟು” ಗಿರಾಕಿ ಕನಸು ಕಾಣುತ್ತಿದ್ದಾನೆ. ಸಿದ್ದರಾಮಯ್ಯನವರೇ, ಆತನ ಯೋಗ್ಯತೆ, ಅರ್ಹತೆ ಏನು ಎಂದು ವಿಚಾರಿಸಿ. ನಿಮ್ಮ ಶಾಶ್ವತ ಪ್ರಧಾನಿ ಅಭ್ಯರ್ಥಿಯ ಬಗ್ಗೆಯೂ ಹೀಗೇ ಮಾತನಾಡುತ್ತೀರಾ ನೀವು? ರಾಹುಲ್ ಗಾಂಧಿ ಹೆಸರು ಪ್ರಸ್ತಾಪಿಸಿ ಬಿಜೆಪಿ ತಿರುಗೇಟು ನೀಡಿದೆ. ಇದನ್ನೂ ಓದಿ: ಸಿದ್ದರಾಮಯ್ಯ ನಮ್ಮ ಪಕ್ಷದ ಬಗ್ಗೆ ಮಾತನಾಡುವುದನ್ನು ಮೊದಲು ನಿಲ್ಲಿಸಲಿ: ಎಚ್ಡಿಕೆ
ಅಪ್ಪ, ಅಜ್ಜಿ, ಮುತ್ತಾತ ಪ್ರಧಾನಿಯಾಗಿದ್ದರೆಂಬ ಕಾರಣಕ್ಕೆ ತಾನು ಪ್ರಧಾನಿಯಾಗಬೇಕೆಂದು ಓರ್ವ “ಹೆಬ್ಬೆಟ್ಟು” ಗಿರಾಕಿ ಕನಸು ಕಾಣುತ್ತಿದ್ದಾನೆ.
ಸಿದ್ದರಾಮಯ್ಯನವರೇ, ಆತನ ಯೋಗ್ಯತೆ, ಅರ್ಹತೆ ಏನು ಎಂದು ವಿಚಾರಿಸಿ.
ನಿಮ್ಮ ಶಾಶ್ವತ ಪ್ರಧಾನಿ ಅಭ್ಯರ್ಥಿಯ ಬಗ್ಗೆಯೂ ಹೀಗೇ ಮಾತನಾಡುತ್ತೀರಾ ನೀವು?#ಬುರುಡೆರಾಮಯ್ಯ
— BJP Karnataka (@BJP4Karnataka) October 17, 2021