ಮಡಿಕೇರಿ: ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಸಾಕಷ್ಟು ಸಮಸ್ಯೆಗಳಿವೆ ಎನ್ನುವ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಕೋವಿಡ್ ಆಸ್ಪತ್ರೆಗೆ ಇಂದು ಧಿಡೀರ್ ಭೇಟಿ ನೀಡಿ ಪರಿಶೀಲಸಿ, ಕೋವಿಡ್ ನಿಯಂತ್ರಣ ಮಾಡಲು ಸಾಮರ್ಥ್ಯವಿಲ್ಲದಿದ್ದರೆ ರಾಜೀನಾಮೆ ಕೊಡಿ ಎಂದು ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
Advertisement
ಕೋವಿಡ್ ಆಸ್ಪತ್ರೆಯ ಪ್ರತೀ ವಾರ್ಡ್ಗೆ ತೆರಳಿದ ಜಿಲ್ಲಾಧಿಕಾರಿ ರೋಗಿಗಳ ಆರೋಗ್ಯ ವಿಚಾರಿಸಿ, ರೋಗಿಗಳ ಸಮಸ್ಯೆಗಳನ್ನು ಆಲಿಸಿದ್ದಾರೆ. ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭ ಕೊವಿಡ್ ರೋಗಿಗಳನ್ನು ನೋಡಲು ಅವರ ಸಂಬಂಧಿಕರು ವಾರ್ಡ್ಗಳಿಗೆ ಬಂದು ಹೋಗುತ್ತಿರುವುದನ್ನು ಗಮನಿಸಿದ ಜಿಲ್ಲಾಧಿಕಾರಿ ಆಸ್ಪತ್ರೆಯ ಸಿಬ್ಬಂದಿ ಮತ್ತು ಡೀನ್ ಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Advertisement
ಜೊತೆಗೆ ಕೆಲವು ವಾರ್ಡಿನಲ್ಲಿ ಸೋಂಕಿತರು ಮಾಸ್ಕ್ ಹಾಕದೇ ಇರುವುದನ್ನು ಗಮನಿಸಿದ ಜಿಲ್ಲಾಧಿಕಾರಿ, ವೈದ್ಯರನ್ನು ಕರೆದು ನೀವೆಲ್ಲ ಏನು ಮಾಡುತ್ತಿದ್ದೀರಿ ನಿಮಗೆ ಸಾಮರ್ಥ್ಯವಿಲ್ಲದಿದ್ದರೆ ರಾಜೀನಾಮೆ ಕೊಟ್ಟು ಹೊರಟು ಹೋಗಿ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.
Advertisement
Advertisement
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಚಾರುಲತಾ ಸೋಮಲ್, ಸೋಂಕಿತರ ಸಂಬಂಧಿಗಳು ಕೇವಲ ಬಟ್ಟೆ ಮಾಸ್ಕ್ ನ್ನು ಧರಿಸಿ ವಾರ್ಡ್ಗಳಿಗೆ ಬಂದು ಹೋಗುತ್ತಿರುವುದು ಗೊತ್ತಾಗಿದೆ. ಇದರಿಂದ ಸೋಂಕು ಹೆಚ್ಚಾಗುವ ಸಾಧ್ಯತೆಗಳು ಇದೆ. ಈ ಬಗ್ಗೆ ಅಸ್ಪತ್ರೆಯ ಸಿಬ್ಬಂದಿಗಳು ಗಮನ ಕೊಡಬೇಕು. ಮುಂದಿನ ದಿನಗಳಲ್ಲಿ ಹೀಗೆ ಮುಂದುವರಿದರೆ ಆಸ್ಪತ್ರೆಯ ಸಿಬ್ಬಂದಿ ಮೇಲೆ ಶಿಸ್ತಿನ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.