– ಸ್ವಲ್ಪ ಯಾಮಾರಿದ್ರೂ ಅಪಾಯ ಕಟ್ಟಿಟ್ಟ ಬುತ್ತಿ
ಚಾಮರಾಜನಗರ: ಕೊರೊನಾ ಭಯ, ಲಾಕ್ಡೌನ್ನಿಂದ ಕಳೆದ ಏಳೆಂಟು ತಿಂಗಳಿನಿಂದ ಮನೆಯಲ್ಲಿಯೇ ಇದ್ದ ಜನ ಈಗ ಪ್ರವಾಸಿ ತಾಣಗಳತ್ತ ಮುಖ ಮಾಡ್ತಿದ್ದಾರೆ. ರಾಜ್ಯದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗ ದಂಡೇ ನೆರೆದಿದೆ. ಮೋಜು ಮಸ್ತಿಯ ಮೂಡ್ನಲ್ಲಿರೋ ಜನ ಕೊಂಚ ಮೈಮರೆತಂತೆ ಕಾಣುತ್ತಿದೆ. ಇದನ್ನೇ ಬಂಡವಾಳ ಮಾಡ್ಕೊಂಡಿರೋರು ಜನರ ಜೀವದ ಜೊತೆ ಚೆಲ್ಲಾಟವಾಡ್ತಿದ್ದಾರೆ.
Advertisement
ಹೌದು. ಕಾವೇರಿ ಮೈದುಂಬಿ ಹರಿಯುತ್ತಿದ್ದು ಕೊಳ್ಳೆಗಾಲದ ಭರಚುಕ್ಕಿಗೆ ಪ್ರವಾಸಿಗರ ದಂಡೇ ಬರುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರೋ ಇಲ್ಲಿನವರು ಪ್ರವಾಸಿಗರಿಗೆ ತೆಪ್ಪದ ಸವಾರಿ ನಡೆಸುತ್ತಿದ್ದಾರೆ. ಭರಚುಕ್ಕಿ, ಮಧ್ಯರಂಗನಾಥಸ್ವಾಮಿ, ಶಿಂಷಾದ ಮಾರಮ್ಮ, ವೆಸ್ಲಿ ಸೇತುವೆ ವೀಕ್ಷಣೆಗೆ ಬರುವ ಪ್ರವಾಸಿಗರು ತೆಪ್ಪದ ಸವಾರಿ ಮಾಡ್ತಿದ್ದಾರೆ.
Advertisement
Advertisement
ಕೆಲವು ವರ್ಷಗಳ ಹಿಂದೆಯೇ ಇಲ್ಲಿ ತೆಪ್ಪದ ಸವಾರಿಯನ್ನು ನಿಷೇಧಿಸಲಾಗಿದೆ. ಆದರೆ ಇದನ್ನು ಲೆಕ್ಕಿಸದ ಕೆಲವರು ತೆಪ್ಪದ ಸವಾರಿ ನಡೆಸುತ್ತಿದ್ದಾರೆ. ತೆಪ್ಪವೇರೋ ಪ್ರವಾಸಿಗರಿಗೆ ಲೈಫ್ ಜಾಕೆಟ್ಗಳನ್ನು ಕೊಡ್ತಿಲ್ಲ. ಸ್ವಲ್ಪ ಹೆಚ್ಚುಕಡಿಮೆಯಾದ್ರೂ ಕಾವೇರಿಯಲ್ಲಿ ಲೀನವಾಗೋದು ಗ್ಯಾರೆಂಟಿಯಾಗಿದೆ. ಇದನ್ನೂ ಓದಿ: ಪ್ರವಾಸಿಗರ ಚೆಲ್ಲಾಟ ಪೊಲೀಸರಿಗೆ ಸಂಕಟ – ಕೊರೊನಾಗೆ ಡೋಂಟ್ಕೇರ್, ಬಿಂದಾಸ್ ಮಸ್ತಿ
Advertisement
ವಿಷಯ ತಿಳಿದ ಬಳಿಕ ಎಚ್ಚೆತ್ತ ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಕಾನೂನು ಬಾಹಿರವಾಗಿ ತೆಪ್ಪ ನಡೆಸುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. ಇನ್ನಾದರೂ ಡೇಂಜರ್ ತೆಪ್ಪದ ಸವಾರಿಗೆ ಬ್ರೇಕ್ ಬೀಳಬೇಕಿದೆ. ಪ್ರವಾಸದ ಜೋಶ್ನಲ್ಲಿರೋ ಜನ ಸಹ ಪ್ರವಾಸಿಸ್ಥಳಗಳಲ್ಲಿನ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಗಮನ ಹರಿಸಬೇಕಿದೆ.