ನವದೆಹಲಿ: ದೇಶದಲ್ಲಿ ಕೊರೊನಾ ಸಾವು, ನೋವು ಹೆಚ್ಚಾಗುತ್ತಿದೆ. ಈ ನಡುವೆ ಕೆಲವು ರಾಜ್ಯಗಳಲ್ಲಿ ಲಾಕ್ಡೌನ್ ಘೋಷಣೆಯಾಗಿದೆ. ಇನ್ನೂ ಕೂಡ ಕೆಲ ತಿಂಗಳುಗಳ ಕಾಲ ಪರಿಸ್ಥಿತಿ ಹೀಗೆ ಇರುವ ಸಾಧ್ಯತೆಯನ್ನು ಅರಿತ ಕೇಂದ್ರ ಸರ್ಕಾರ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನಡೆಯುವ ಈ ಬಾರಿಯ ರಾಷ್ಟ್ರೀಯ ಪ್ರವೇಶ ಪರೀಕ್ಷೆಯನ್ನು 4 ತಿಂಗಳು ಮುಂದೂಡಿಕೆ ಮಾಡಿದೆ.
Advertisement
ಈ ಕುರಿತು ತಿಳಿಸಿರುವ ಕೇಂದ್ರ ಸರ್ಕಾರ, ಕೋವಿಡ್-19 ವಿರುದ್ಧ ಹೋರಾಡಲು ವೈದ್ಯಕೀಯ ಸಿಬ್ಬಂದಿಗಳ ಕೊರತೆಯನ್ನು ನೀಗಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ, ನೀಟ್ ಪಿಜಿ ಪರೀಕ್ಷೆಯನ್ನು ಕನಿಷ್ಠ 4 ತಿಂಗಳವರೆಗೆ ಮುಂದೂಡಲಾಗುವುದು ಎಂದು ಮಾಹಿತಿ ನೀಡಿದೆ.
Advertisement
Prime Minister Narendra Modi authorises keys decisions to boost availability of medical personnel to fight COVID-19. NEET-PG Exam to be postponed for at least 4 months: Prime Minister's Office
— ANI (@ANI) May 3, 2021
Advertisement
ಇದರೊಂದಿಗೆ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಟೆಲಿಕನ್ಸಲ್ಟೇಷನ್ ಹಾಗೂ ಸಣ್ಣ ಪ್ರಮಾಣದ ಲಕ್ಷಣಗಳಿರುವ ಕೋವಿಡ್ ಪ್ರಕರಣಗಳ ಮೇಲ್ವಿಚಾರಣೆಗೆ ಬಳಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಲಾಗಿದೆ. ಹಿರಿಯ ವೈದ್ಯರು ಮತ್ತು ನರ್ಸ್ ಗಳ ಮೇಲ್ವಿಚಾರಣೆಯಲ್ಲಿ ಬಿಎಸ್ಸಿ ಮತ್ತು ಜಿಎನ್ಎಂ ಅರ್ಹ ನರ್ಸ್ ಗಳನ್ನು ಪೂರ್ಣ ಪ್ರಮಾಣದ ಕೋವಿಡ್ ನರ್ಸಿಂಗ್ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವ ಕುರಿತು ಈಗಾಗಲೇ ಪ್ರಧಾನಿ ಒಳವನ್ನು ತೋರಿಸಿದ್ದಾರೆ ಎಂದು ವರದಿಯಾಗಿದೆ.
Advertisement
Final Year MBBS students can be utilized for teleconsultation and monitoring of mild Covid cases under the supervision of Faculty. BSc/GNM Qualified Nurses to be utilized in full-time Covid nursing duties under the supervision of Senior Doctors and Nurses: PMO
— ANI (@ANI) May 3, 2021
ಈ ಮೊದಲು ಏಪ್ರಿಲ್ 18 ರಂದು ನೀಟ್ ಪರೀಕ್ಷೆ ನಿಗದಿಯಾಗಿತ್ತು. ಬಳಿಕ ಕೊರೊನಾ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಹೆಚ್ಚಾದ ಕಾರಣ ಕೇಂದ್ರ ಸರ್ಕಾರದಿಂದ ಮುಂದೂಡಲಾಗಿತ್ತು. ಆ ಬಳಿಕ ಇದೀಗ 4 ತಿಂಗಳುಗಳ ಕಾಲ ಇದು ಮುಂದೂಡಿಕೆಯಾಗಿದೆ.