ನೀಲಿ ಚಿತ್ರ ನಿರ್ಮಾಣ – ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅರೆಸ್ಟ್

Public TV
Public TV - Digital Head
0 Min Read

ಮುಂಬೈ: ಅಶ್ಲೀಲ ಚಿತ್ರಗಳನ್ನು ನಿರ್ಮಿಸಿದ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ.

ಅಶ್ಲೀಲ ಚಿತ್ರಗಳನ್ನು ನಿರ್ಮಿಸಿ, ಮೊಬೈಲ್ ಅಪ್ಲಿಕೇಶನ್ ನಲ್ಲಿ ಅಪ್ಲೋಡ್ ಮಾಡಿದವರ ವಿರುದ್ಧ ಪೊಲೀಸರು ಫೆಬ್ರವರಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಕುಂದ್ರಾ ಪ್ರಮುಖ ಸಂಚುಕೋರ ವ್ಯಕ್ತಿಯಾಗಿದ್ದಾರೆ. ಕುಂದ್ರಾ ವಿರುದ್ಧ ಸಾಕಷ್ಟು ಸಾಕ್ಷ್ಯಗಳು ಸಿಕ್ಕಿವೆ ಎಂದು ಪೊಲೀಸರು ತಿಳಿದ್ದಾರೆ.

ಕುಂದ್ರಾ ಅವರನ್ನು ಜುಲೈ 19ರಂದು ಬಂಧಿಸಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share This Article