ಹಾವೇರಿ: ಹಾವೇರಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹನುಮಂತರಾಯರವರು ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.
ಬೆಂಗಳೂರು ಸಿಓಡಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ವರ್ಗಾವಣೆಗೊಂಡಿರುವ ನಿರ್ಗಮಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜುರವರು ಅಧಿಕಾರ ಹಸ್ತಾಂತರಿಸಿ ಹೂಗುಚ್ಛ ನೀಡಿ ನೂತನ ಎಸ್.ಪಿ. ಅವರನ್ನು ಸ್ವಾಗತಿಸಿದರು.
Advertisement
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಳೆದ ಒಂದು ವರ್ಷ 10 ತಿಂಗಳಿನಿಂದ ಕಾರ್ಯನಿರ್ವಹಿಸುತ್ತಿದ್ದ ಹನುಮಂತರಾಯ ಅವರು ಮೂಲತಃ ಕಲಬುರಗಿ ಜಿಲ್ಲೆಯವರಾಗಿದ್ದು, ಧಾರವಾಡ ವಿಶ್ವವಿದ್ಯಾಲಯದ ಕೃಷಿ ಸ್ನಾತಕೋತ್ತರ ಪದವೀಧರರಾಗಿದ್ದಾರೆ. ಸ್ನಾತಕೋತ್ತರ ಪದವಿ ನಂತರ ಕೃಷಿ ಬ್ಯಾಂಕ್ವೊಂದಲ್ಲಿ ಐದು ವರ್ಷಗಳ ಕಾಲ ಫಿಲ್ಡ್ ಆಫೀಸರ್ ಆಗಿ ಕಾರ್ಯನಿರ್ವಹಿಸಿ ಕರ್ನಾಟಕ ಆಡಳಿತ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ 2008ರಲ್ಲಿ ಡಿ.ವೈ.ಎಸ್.ಪಿ.ಯಾಗಿ ನೇಮಕಗೊಂಡು, ಹರಪನಹಳ್ಳಿ, ಚಳ್ಳಕೇರಿ, ತುಮಕೂರಲ್ಲಿ ಡಿ.ವೈ.ಎಸ್.ಪಿ. ಕೆಲಸಮಾಡಿದ್ದಾರೆ. ಮುಂಬಡ್ತಿಹೊಂದಿ ಮಂಗಳೂರು, ಹುಬ್ಬಳ್ಳಿ-ಧಾರವಾಡಗಳಲ್ಲಿ ಡಿಸಿಪಿಯಾಗಿ, ಬೆಂಗಳೂರಿನಲ್ಲಿ ಇಂಟ್ಲಿಜೆನ್ಸಿ ವಿಭಾಗದಲ್ಲಿ ಕೆಲಸ ಮಾಡಿದ್ದಾರೆ. ಅಲ್ಲದೆ ದಾವಣಗೆರೆ ಇಂಟ್ಲಿಜೆನ್ಸಿ ವಿಭಾಗದಲ್ಲೂ ಕೆಲಸ ಮಾಡಿದ್ದಾರೆ. 2012ರ ಐಪಿಎಸ್ ಬ್ಯಾಚ್ನ ಅಧಿಕಾರಿಯಾದ ಇವರು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಇದೀಗ ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
Advertisement
Advertisement
ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತದೊಂದಿಗೆ ಪೊಲೀಸ್ ಇಲಾಖೆ ಜೊತೆಯಾಗಿ ಟೀಮ್ ವರ್ಕ್ ಮಾಡಲಿದೆ. ಸರ್ಕಾರದ ನಿಯಮಗಳನ್ನು ಪೊಲೀಸ್ ಕರ್ತವ್ಯಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುವುದು. ಜನಸ್ನೇಹಿ ಪೊಲೀಸ್ ಸೇವೆಗೆ ಆದ್ಯತೆ ನೀಡಲಾಗುವುದು ಎಂದಿದ್ದಾರೆ.
Advertisement
ಗ್ರಾಮೀಣ ಮತ್ತು ನಗರದ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲಾಗುವುದು. ಅತೀ ಶೀಘ್ರದಲ್ಲಿ ಜನರಿಗೆ ಪೊಲೀಸ್ ಸೇವೆಗಳು ದೊರಕಬೇಕು. ಈ ನಿಟ್ಟಿನಲ್ಲಿ ಇ.ಆರ್.ಎಸ್.ಎಸ್(ಏಮರ್ಜೆಸ್ಸಿ ರೆಸ್ಪಾನ್ಸ್ ಸಪೋರ್ಟ್ ಸಿಸ್ಟಂ) ಸೇವೆಯನ್ನು ಬಲಪಡಿಸಲಾಗುವುದು ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದ ಹನುಮಂತರಾಯರವರು ಹೇಳಿದ್ದಾರೆ. ಇದನ್ನು ಓದಿ: ಜೂನ್ 14ರಿಂದ ರಾಜ್ಯದಲ್ಲಿ ಅನ್ಲಾಕ್ ಪ್ರಕ್ರಿಯೆ – 11 ಜಿಲ್ಲೆಗಳು ಇನ್ನೊಂದು ವಾರ ಲಾಕ್
ಪೊಲೀಸ್ ಇಲಾಖೆಯಲ್ಲಿ ಹೆಚ್ಚಿನ ತಂತ್ರಜ್ಞಾನ, ತಂತ್ರಾಂಶಗಳ ಮೂಲಕ ತನಿಖಾ ಕೆಲಸ ಸೇರಿದಂತೆ ಪೊಲೀಸ್ ಸೇವೆಯನ್ನು ಉನ್ನತೀಕರಿಸಲಾಗುವುದು. ಅಪರಾಧ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿಗೊಳಿಸಿ ತ್ವರಿತವಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕೊರೊನಾದಂತಹ ಸಂದರ್ಭದಲ್ಲಿ ಮುಂಚೂಣಿಯಲ್ಲಿ ಕೆಲಸಮಾಡುವ ಪೊಲೀಸ್ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳ ಆರೋಗ್ಯ ಮತ್ತು ಕಲ್ಯಾಣಕ್ಕಾಗಿ ಆದ್ಯತೆ ನೀಡಲಾಗುವುದು. ಎಲ್ಲ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಂದು ತಂಡವಾಗಿ ಕಾರ್ಯನಿರ್ವಹಿಸಲಾಗುವುದು ಎಂದಿದ್ದಾರೆ.
ಅಪರಾಧ ಪ್ರಕರಣಗಳು, ಸರಗಳ್ಳತನ ನಿಯಂತ್ರಣ ಕುರಿತಂತೆ ಅಧಿಕಾರಿಗಳ ಸಭೆ ಕರೆದು ಪರಿಶೀಲನೆ ನಡೆಸಲಾಗುವುದು. ಸ್ಥಳೀಯ ಆಡಳಿತದ ಸಹಕಾರದೊಂದಿಗೆ ಸಿಸಿ ಕ್ಯಾಮರಾ ಅಳವಡಿಕೆ, ದುರಸ್ಥಿ ಹಾಗೂ ಖಾಸಗಿ ಮನೆ, ಶ್ಯಾಪಿಂಗ್ ಮಾಲ್, ಅಪಾರ್ಟ್ಮೆಂಟ್ಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆಗೆ ಮನವೊಲಿಸಿ ಜಾಗೃತಿ ಮೂಡಿಸಲಾಗುವುದು ಎಂದು ನುಡಿದಿದ್ದಾರೆ. ಇದನ್ನು ಓದಿ:11 ಜಿಲ್ಲೆಗಳು ಲಾಕ್ – ನೈಟ್ ಕರ್ಫ್ಯೂ ಜೊತೆಯಲ್ಲಿ ವೀಕೆಂಡ್ ಲಾಕ್ಡೌನ್