– ಚಾಲನೆ ನೀಡಿದ ಪ್ರಧಾನಿ ಮೋದಿ
ನವದೆಹಲಿ: ದೇಶದಲ್ಲಿ ಡಿಜಿಟಲೀಕರಣ ಅತೀ ವೇಗವಾಗಿ ಹಬ್ಬುತ್ತಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಡಿಜಿಟಲ್ ಪಾವತಿಗೆ ಹೊಸ ಸ್ಪರ್ಶ ನೀಡಲು ಮುಂದಾಗಿದ್ದು, ಇ-ರುಪೀಗೆ ಪ್ರಧಾನಿ ಚಾಲನೆ ನೀಡಿದ್ದಾರೆ.
Advertisement
ದೇಶದಲ್ಲಿ ಈಗಾಗಲೇ ಪ್ರತಿ ಕ್ಷೇತ್ರದಲ್ಲಿ ಡಿಜಿಟಲೀಕರಣ ವೇಗ ಪಡೆದುಕೊಂಡಿದೆ. ನೋಟು ಅಮಾನ್ಯದ ಬಳಿಕ ಡಿಜಿಟಲ್ ಪೇಮೆಂಟ್ ಭಾರತದಲ್ಲಿ ಹೊಸ ಬದಲಾವಣೆಯನ್ನು ತಂದಿದೆ. ದೊಡ್ಡ ದೊಡ್ಡ ವ್ಯಾಪಾರಿಯಿಂದ ಹಿಡಿದು ಸಣ್ಣ ವ್ಯಾಪಾರಿ ಕೂಡ ಕ್ಯೂಆರ್ ಕೋಡ್ ಬಳಸಿ ನಗದು ರಹಿತ ವ್ಯವಹಾರ ನಡೆಸುತ್ತಿದ್ದಾರೆ. ಈಗ ಇಂಟರ್ ನೆಟ್ ಸಂಪರ್ಕ ಇಲ್ಲದೇ ಹಣವನ್ನು ಕಳುಹಿಸಬಹುದಾದ ಸೇವೆಗೆ ಮೋದಿ ಚಾಲನೆ ನೀಡಿದರು.
Advertisement
Advertisement
ಏನಿದು ಇ-ರುಪೀ?
ಡಿಜಿಟಲ್ ಪಾವತಿಯನ್ನು ಸರಳಗೊಳಿಸುವ ಸಲುವಾಗಿ ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ಹೊಸ ಡಿಜಿಟಲ್ ಪಾವತಿ ವ್ಯವಸ್ಥೆಯಾಗಿದೆ. ಇದು ನಗದು ರಹಿತವಾಗಿ, ಇಂಟರ್ ನೆಟ್ ಸಂಪರ್ಕವಿಲ್ಲದೆ, ಕ್ಯೂಆರ್ ಕೋಡ್ ಅಥವಾ ಎಸ್ಎಂಎಸ್ ಆಧಾರಿತ ಇ-ವೋಚರ್ ನ ಡಿಜಿಟಲ್ ಪಾವತಿ ವ್ಯವಸ್ಥೆಯಾಗಿದೆ. ಇದನ್ನೂ ಓದಿ: ಠಾಣೆಗೆ ಮುತ್ತಿಗೆ ಹಾಕಿದ ಆಫ್ರಿಕಾ ಪ್ರಜೆಗಳ ವಿರುದ್ಧ ಲಾಠಿಚಾರ್ಜ್
Advertisement
ಯಾರು ಇ-ರುಪೀ ಫಲಾನುಭವಿಗಳಿರುತ್ತಾರೋ ಅವರ ಮೊಬೈಲ್ಗೆ ಸಂದೇಶದ ಮೂಲಕ ಕಳುಹಿಸಬಹುದು. ಕಾರ್ಡ್, ಡಿಜಿಟಲ್ ಪಾವತಿ ತಂತ್ರಾಂಶ ಅಥವಾ ಇಂಟರ್ನೆಟ್ ಬ್ಯಾಕಿಂಗ್ ಬಳಸದೇ ಇ-ರುಪೀ ಸಂದೇಶದ ಮೂಲಕ ವೋಚರ್ ಬಳಸಬಹುದಾಗಿದೆ.
Launching e-RUPI. Watch. https://t.co/JeQo93yZXM
— Narendra Modi (@narendramodi) August 2, 2021
ಹಣಕಾಸು ಸೇವೆಗಳ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದೊಂದಿಗೆ ಈ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದೆ.
ದೇಶದಲ್ಲಿ ಈಗಾಗಲೇ ಕೊರೊನಾದಿಂದಾಗಿ ಶಿಕ್ಷಣ ಕ್ಷೇತ್ರದಲ್ಲೂ ಡಿಜಿಟಲ್ ಬದಲಾವಣೆಗಳು ನಡೆಯುತ್ತಿವೆ. ಇದರೊಂದಿಗೆ ಇದೀಗ ಡಿಜಿಟಲ್ ಕ್ಷೇತ್ರಕ್ಕೆ ಇ-ರುಪೀ ಕಾಲಿಡುತ್ತಿದೆ.