ಬೆಂಗಳೂರು: ಕೊರೊನಾ ನಿಯಂತ್ರಣ ಹಿನ್ನೆಲೆ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ನಗರದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಅಲ್ಲದೆ 8 ಜಿಲ್ಲೆಗಳಲ್ಲಿ ವೀಕೆಂಡ್ ಲಾಕ್ಡೌನ್ ಘೋಷಿಸಿದೆ. ಸಿಲಿಕಾನ್ ಸಿಟಿಯಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿರುವುದರಿಂದ ಮೆಟ್ರೋ ಓಡಾಟದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
Advertisement
ಆಗಸ್ಟ್ 7 ರಿಂದ 16ರ ವರೆಗೆ ರಾಜ್ಯದಲ್ಲಿ ರಾತ್ರಿ 9.00 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಹೀಗಾಗಿ ಕೊನೆಯ ಮೆಟ್ರೋ ರೈಲು ಸೇವೆಯೂ ಟರ್ಮಿನಲ್ ನಿಲ್ದಾಣಗಳಿಂದ ರಾತ್ರಿ 9 ಗಂಟೆಯ ಬದಲು ರಾತ್ರಿ 8 ಗಂಟೆಗೆ ಹೊರಡಲಿದೆ ಎಂದು ನಮ್ಮ ಮೆಟ್ರೋ ತಿಳಿಸಿದೆ. ನಾಳೆಯಿಂದಲೇ ಈ ಸಮಯ ಬದಲಾವಣೆ ಅನ್ವಯವಾಗಲಿದೆ. ಇದನ್ನೂ ಓದಿ: ರಾಜ್ಯದ 8 ಜಿಲ್ಲೆಗಳಲ್ಲಿ ಇಂದಿನಿಂದಲೇ ವೀಕೆಂಡ್ ಕರ್ಫ್ಯೂ ಜಾರಿ
Advertisement
Advertisement
ಬೆಂಗಳೂರಿನಲ್ಲಿ ಇಂದು 441 ಕೊರೊನಾ ಕೇಸ್ ದಾಖಲಾಗಿದ್ದು, 7 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. 434 ಮಂದಿ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ನಗರದಲ್ಲಿ ಇನ್ನೂ 8,560 ಸಕ್ರಿಯ ಪ್ರಕರಣಗಳಿವೆ. ಇದನ್ನೂ ಓದಿ: ನಿಧಾನವಾಗಿ ಏರುತ್ತಿದೆ ಕೊರೊನಾ ಪಾಸಿಟಿವಿಟಿ ರೇಟ್, ಇಂದು ಶೇ.1.11- 1,805 ಹೊಸ ಕೇಸ್, 36 ಸಾವು