ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಹಿನ್ನೆಲೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ಗೆ ಒಂದು ರೂಪಾಯಿ ದಂಡ ಪಾವತಿಸುವಂತೆ ಸೂಚಿಸಿ ಸುಪ್ರೀಂಕೋರ್ಟ್ ಆದೇಶ ನೀಡಿದೆ.
ಸೆಪ್ಟೆಂಬರ್ 15 ರೊಳಗೆ ಸುಪ್ರೀಂಕೋರ್ಟ್ ರಿಜಿಸ್ಟ್ರಾರ್ ಗೆ ದಂಡ ಪಾವತಿಸಬೇಕು. ಒಂದು ವೇಳೆ ದಂಡ ಪಾವತಿಸದಿದ್ದರೇ ಮೂರು ತಿಂಗಳು ಜೈಲು ಶಿಕ್ಷೆ ಮತ್ತು ಮೂರು ತಿಂಗಳು ಕೋರ್ಟ್ ಕಲಾಪಗಳಿಂದ ನಿರ್ಬಂಧಿಸುವುದಾಗಿ ಕೋರ್ಟ್ ಎಚ್ಚರಿಕೆ ನೀಡಿದೆ.
Advertisement
Supreme Court imposes a fine of Re 1 fine on Prashant Bhushan. In case of default, he will be barred from practising for 3 years & will be imprisoned of 3 months https://t.co/0lMbqiizBb
— ANI (@ANI) August 31, 2020
Advertisement
ಸುಪ್ರೀಂಕೋರ್ಟ್ ಹಾಗೂ ನ್ಯಾಯಾಧೀಶರ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಹಿನ್ನಲೆ ಸುಪ್ರೀಂಕೋರ್ಟ್ ಪ್ರಶಾಂತ್ ಭೂಷಣ್ ವಿರುದ್ಧ ನ್ಯಾಯಾಂಗ ನಿಂದನೆ ಆದೇಶ ನೀಡಿತ್ತು. ಆದೇಶ ಮರುಪರಿಶೀಲಿಸುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಕೊರ್ಟ್ ಗೆ ಕ್ಷಮೆ ಕೇಳುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತು. ಆದರೆ ವಕೀಲ ಪ್ರಶಾಂತ್ ಭೂಷಣ್ ಕ್ಷಮೆ ಕೇಳದ ಹಿನ್ನೆಲೆ ಇಂದು ಒಂದು ರೂಪಾಯಿ ಜುಲ್ಮಾನೆ ವಿಧಿಸಿ ಆದೇಶ ಹೊರಡಿಸಿದೆ.
Advertisement
Pictures of Prashant Bhushan with Senior Advocate Dr. Rajeev Dhavan after the Judgment#SupremeCourt #ContemptOfCourt #PrashantBhushan #PrashantBhushanCase Rs 1 #JusticeMishra @pbhushan1 pic.twitter.com/3u2Utt4Pxr
— Bar & Bench (@barandbench) August 31, 2020
Advertisement
ಸುಪ್ರೀಂಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಇಂದು ಸಂಜೆ 4 ಗಂಟೆಗೆ ಸಿಜೆಎಆರ್ ಮತ್ತು ಸ್ವರಾಜ್ ಅಭಿಯಾನ್ ಸುದ್ದಿಗೋಷ್ಠಿ ಕರೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರಶಾಂತ್ ಭೂಷಣ್, ಯೋಗೇಂದ್ರ ಯಾದವ್ ಮತ್ತು ಅಂಜಲಿ ಭಾರಧ್ವಜ್ ಭಾಗಿಯಾಗಲಿದ್ದಾರೆ.