ಹಾವೇರಿ: ಇನ್ನೋವಾ ಕಾರು ಪಲ್ಟಿಯಾಗಿ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಹಾವೇರಿ ತಾಲೂಕಿನ ನಾಗನೂರು ಬ್ರಿಡ್ಜ್ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮೂವರಿಗೆ ಗಾಯಗೊಂಡಿದ್ದಾರೆ.
Advertisement
ತಮಿಳುನಾಡಿನಿಂದ ಗೋವಾದತ್ತ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಳಗಿನ ಜಾವ ಚಾಲಕ ನಿದ್ದೆಗೆ ಜಾರಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪಾರಾಗಿದ್ದಾರೆ.
Advertisement
Advertisement
ಸದ್ಯ ಕಾರಿನಲ್ಲಿದ್ದ ಮೂವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.