ಮುಂಬೈ: ಕೊರೊನಾ ಆತಂಕದ ಹಿನ್ನೆಲೆ ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಪಿಪಿಇ ಕಿಟ್, ಮಾಸ್ಕ್, ಗ್ಲೌಸ್ ಧರಿಸಿ ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ನಟಿಯ ಫೋಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
Advertisement
ಅನ್ಲಾಕ್ ಆಗಿದ್ದರಿಂದ ದೇಶಿಯ ವಿಮಾನಗಳ ಹಾರಾಟಕ್ಕೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಹಾಗಾಗಿ ಪ್ರಯಾಣಿಕರು ಸಹ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಪ್ರಯಾಣಿಸುತ್ತಿದ್ದಾರೆ. ಬಾಲಿವುಡ್ ತಾರೆಯರು ಸಹ ದಿಢೀರ್ ಲಾಕ್ಡೌನ್ ಘೋಷಣೆ ಆಗಿದ್ದರಿಂದ ಇದ್ದ ಸ್ಥಳದಲ್ಲಿಯೇ ಲಾಕ್ ಆಗಿದ್ದರು. ವಿಮಾನ ಸಂಚಾರಕ್ಕೆ ಅನುಮತಿ ಸಿಕ್ಕ ಹಿನ್ನೆಲೆಯಲ್ಲಿ ಪ್ರಯಾಣಿಸುತ್ತಿದ್ದಾರೆ.
Advertisement
Advertisement
ನಟಿ ರಕುಲ್ ಸಹ ಮುಂಬೈನಿಂದ ದೆಹಲಿಗೆ ತೆರಳಿದ್ದಾರೆ ಎಂದು ವರದಿಯಾಗಿದೆ. ಕೊರೊನಾ ಆತಂಕದ ಹಿನ್ನೆಲೆ ಮನೆಯಿಂದಲೇ ರಕುಲ್ ಪಿಪಿಇ ಕಿಟ್, ಮಾಸ್ಕ್, ಗ್ಲೌಸ್ ಧರಿಸಿ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ. ಬುಧವಾರ ರಕುಲ್ ಸಿಂಗ್ ಜಾಗಿಂಗ್ ವಿಡಿಯೋ ವೈರಲ್ ಆಗಿತ್ತು.
Advertisement
https://www.instagram.com/p/CBSYAXknskv/
https://www.instagram.com/p/CBSTiTBHdNd/