ಗದಗ: ಪುಲ್ವಾಮಾ ದಾಳಿ ವೇಳೆ ಹುತಾತ್ಮರಾದ ಯೋಧರಿಗಾಗಿ ವಿಭಿನ್ನ ಹಾಗೂ ವಿಶಿಷ್ಟವಾಗಿ ಸ್ಮರಣೋತ್ಸವ ಕಾರ್ಯಕ್ರಮವನ್ನು ಗದಗ ಜಿಲ್ಲೆಯಲ್ಲಿ ನಡೆಸಲಾಯಿತು.
Advertisement
ಆಟೋ ಚಾಲಕರ ಹಾಗೂ ಮಾಲೀಕರ ಸಂಘದಿಂದ ಹುತಾತ್ಮ ಯೋಧರ ಭಾವಚಿತ್ರಗಳನ್ನು ಆಟೋದಲ್ಲಿ ಮೆರವಣಿಗೆ ಮಾಡುವ ಮೂಲಕ ಸ್ಮರಣೋತ್ಸವ ಆಚರಿಸಿದರು. ಈ ಆಟೋ ರ್ಯಾಲಿಗೆ ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಮತ್ತು ಪ್ರಸಾರ ಇಲಾಖೆ ಸಚಿವ ಸಿ.ಸಿ ಪಾಟೀಲ್ ವೀರಯೋಧರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
Advertisement
Advertisement
ಈ ಸಂದರ್ಭದ್ಲಿ ಇತ್ತೀಚಿಗೆ ಭಾರತೀಯ ಸೇನೆಯಿಂದ ನಿವೃತ್ತಿ ಹೊಂದಿದ ಯೋಧರಿಗೆ ಸನ್ಮಾನಿಸಲಾಯಿತು. ಅವರು ಸಹ ಇಂದು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
Advertisement
ನಗರದ ತೋಂಟದಾರ್ಯ ಮಠದಿಂದ ಆರಂಭವಾದ ರ್ಯಾಲಿ, ಅವಳಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಹಾತ್ಮ ಗಾಂಧಿ ವೃತ್ತದ ವರೆಗೆ ಈ ಆಟೋ ರ್ಯಾಲಿ ನಡೆಯಿತು. ಈ ವೇಳೆ ಸಚಿವ ಸಿ.ಸಿ.ಪಾಟೀಲ್, ಶಾಸಕ ಕಳಕಪ್ಪ ಬಂಡಿ, ಎಸ್.ವಿ ಸಂಕನೂರ ಸೇರಿದಂತೆ ಅನೇಕರು ಸ್ಮರಣೋತ್ಸವದಲ್ಲಿ ಭಾಗಿಯಾಗಿದ್ದರು.
ಗದಗ ಆಟೋ ಚಾಲಕ ಸಂಘದಿಂದ ಭಾರತೀಯ ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದರು. ದಾರಿಯುದ್ದಕ್ಕೂ ಪುಷ್ಪಗಳನ್ನು ಎರಚುವ ಮೂಲಕ ಭಾರತ ಮಾತೆಗೆ ಜೈಘೋಷ ಕೂಗಿದರು.