ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಮತ್ತೆ ಉಗ್ರರು ದಾಳಿ ನಡೆಸಿದ್ದಾರೆ. ಸೈನಿಕರ ವಾಹನವನ್ನು ಗುರಿಯಾಗಿಸಿ ಗ್ರೆನೇಡ್ ದಾಳಿ ನಡೆಸಿದ್ದು 12 ಮಂದಿ ನಾಗರಿಕರು ಗಾಯಗೊಂಡಿದ್ದಾರೆ.
ಪುಲ್ವಾಮಾದ ಕಾಕಾಪೋರದಲ್ಲಿ ಸಿಆರ್ಪಿಎಫ್ ಮತ್ತು ಪೊಲೀಸರ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಆದರೆ ಗ್ರೆನೇಡ್ ಗುರಿ ತಪ್ಪಿ ರಸ್ತೆಯ ಮೇಲೆ ಬಿದ್ದ ಪರಿಣಾಮ 10 ಮಂದಿ ನಾಗರಿಗರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
#Breaking | Terrorists hurled grenade on security Forces in Pulwama.
10 civilians injured. pic.twitter.com/KaJZWnxpVR
— TIMES NOW (@TimesNow) November 18, 2020
Advertisement
ಗಾಯಗೊಂಡ ಎಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು ಆರೋಗ್ಯ ಸ್ಥಿರವಾಗಿದೆ. ಸದ್ಯ ಈಗ ಈ ಪ್ರದೇಶವನ್ನು ಭದ್ರತಾ ಪಡೆ ಸುತ್ತುವರಿದಿದ್ದು ಉಗ್ರರಿಗಾಗಿ ಹುಡುಕಾಟ ಆರಂಭವಾಗಿದೆ.
Advertisement
ಕಳೆದ ವರ್ಷದ ಫೆ. 14 ರಂದು ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಯೋಧರಿದ್ದ ಬಸ್ಸಿಗೆ ಜೈಷ್ ಉಗ್ರ ಅದಿಲ್ ಅಹ್ಮದ್ ದಾರ್ ಇಕೋ ಕಾರನ್ನು ಗುದ್ದಿಸಿದ್ದ. ಪರಿಣಾಮ 40 ಮಂದಿ ಸೈನಿಕರು ಹುತಾತ್ಮರಾಗಿದ್ದರು. ಸ್ಫೋಟದ ತೀವ್ರತೆಗೆ ಯೋಧರ ದೇಹದ ಭಾಗಗಳು ಛಿದ್ರ ಛಿದ್ರವಾಗಿ ದೂರದವರೆಗೆ ಚಿಮ್ಮಿತ್ತು. ಈ ದಾಳಿಗೆ ಪ್ರತೀಕಾರವಾಗಿ ಭಾರತದ ವಾಯುಸೇನೆ ಮೊದಲ ಬಾರಿಗೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರರ ಶಿಬಿರಗಳ ಮೇಲೆ ವಿಮಾನಗಳ ಮೂಲಕ ಬಾಂಬ್ ದಾಳಿ ನಡೆಸಿತ್ತು.
Advertisement