ನವದೆಹಲಿ: ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಆಗುತ್ತಿದ್ದು ಮುಂದೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್ ಹಾಕುವುದಾಗಿ ತಿಳಿಸಿದ್ದಾರೆ.
Advertisement
Advertisement
ಒಂದು ಲೀಟರ್ ಪೆಟ್ರೋಲ್ ಮೇಲೆ 2.5 ರೂ., ಡೀಸೆಲ್ ಮೇಲೆ 4 ರೂ. ಸೆಸ್ ವಿಧಿಸುವುದಾಗಿ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ.
Advertisement
Advertisement
ಪೆಟ್ರೋಲ್ ಮತ್ತು ಡೀಸೆಲ್ಗಳು ಜಿಎಸ್ಟಿ ವ್ಯಾಪ್ತಿಯಲ್ಲಿ ಬರುವುದಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಹೆಚ್ಚು ಆದಾಯವನ್ನು ತರುತ್ತದೆ. ಹೀಗಾಗಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸೆಸ್ ವಿಧಿಸುತ್ತದೆ.