ಮೈಸೂರು: ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ 50 ಸಜೀವ ಗುಂಡುಗಳು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಕಪಿಲಾ ನದಿಯಲ್ಲಿ 20 ಗುಂಡುಗಳು ಪತ್ತೆಯಾಗಿವೆ.
ಜಿಲ್ಲೆಯ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ 50 ಗುಂಡುಗಳು ನಾಪತ್ತೆಯಾಗಿದ್ದವು. 303 ಮಾದರಿ ಬಂದೂಕಿನ ಗುಂಡುಗಳು ನಾಪತ್ತೆಯಾಗಿದ್ದವು. ಗುಂಡುಗಳು ಹೇಗೆ ನಾಪತ್ತೆಯಾಗಿವೆ ಎಂಬುದು ಪತ್ತೆಯಾಗಿಲ್ಲ. ಈ ಸಂಬಂಧ ಎಸ್ಪಿ ಸಿ.ಬಿ.ರಿಷ್ಯಂತ್ ಇಬ್ಬರನ್ನು ಅಮಾನತುಗೊಳಿಸಿದ್ದರು. ಇದೀಗ ಕಪಿಲಾ ನದಿಯಲ್ಲಿ ಗುಂಡುಗಳು ಪತ್ತೆಯಾಗಿದೆ.
Advertisement
Advertisement
ಮಾಹಿತಿ ಆಧಾರದ ಮೇರೆಗೆ ಕಪಿಲಾ ನದಿಯಲ್ಲಿ ಎಎಸ್ಪಿ ಸ್ನೇಹ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಸತತ 2 ಗಂಟೆಗಳ ಶೋಧದ ನಂತರ 20 ಗುಂಡುಗಳು ಪತ್ತೆಯಾಗಿದೆ. ಸದ್ಯಕ್ಕೆ ಉಳಿದ 30 ಗುಂಡುಗಳ ಪತ್ತೆಗಾಗಿ ತನಿಖೆ ಮುಂದುವರಿದೆ.
Advertisement
ಈ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.