ಬಳ್ಳಾರಿ: ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮುಂದುವರೆಸಿದ್ದು, ಈವರೆಗೂ 10,263 ಜನರಿಗೆ ಸೋಂಕು ತಗಲಿದೆ. ಅದರಲ್ಲಿ ಸುಮಾರು 296 ಜನ ಪೊಲೀಸ್ ಸಿಬ್ಬಂದಿಗೆ ಸೋಂಕು ದೃಢವಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿ ಚಿಕಿತ್ಸೆಗಾಗಿ ನೂರು ಬೆಡ್ಗಳ ಕೋವಿಡ್ ಕೇರ್ ಸೆಂಟರ್ ತಲೆ ಎತ್ತಿದೆ.
296 ಜನರಲ್ಲಿ ಬಹುತೇಕ ಸಿಬ್ಬಂದಿ ಎ ಸಿಮ್ಟಮ್ಯಾಟಿಕ್ ಹೊಂದಿರುವ ಕಾರಣ ಪೊಲೀಸ್ ಇಲಾಖೆ ತನ್ನ ಎಲ್ಲಾ ಸಿಬ್ಬಂದಿಯನ್ನು ಒಂದೇ ಕಡೆಯಲ್ಲಿ ಚಿಕಿತ್ಸೆ ನೀಡಲು ಮುಂದಾಗಿದೆ. ಹೀಗಾಗಿ ಬಳ್ಳಾರಿಯ ಕೌಲ್ ಬಜಾರ್ ಬಳಿ ಇರುವ ವಾಲ್ಮೀಕಿ ಭವನವನ್ನು ಕೋವಿಡ್ ಕೇರ್ ಸೆಂಟರ್ ಮಾಡಿಕೊಂಡಿದ್ದು, ಸುಮಾರು ನೂರು ಬೆಡ್ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಇರುವ ಸೋಂಕಿತ ಪೊಲೀಸರಿಗೆ ಇನ್ನು ಮುಂದೆ ವಾಲ್ಮೀಕಿ ಭವನದಲ್ಲಿ ಚಿಕಿತ್ಸೆ ನೀಡಲಾಗುವುದು.
Advertisement
Advertisement
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹಾಗೂ ಎಸ್.ಪಿ. ಸಿಕೆ ಬಾಬಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆಯಲ್ಲಿ ಮಾತನಾಡಿದ ಜಿಲ್ಲಾ ಎಸ್.ಪಿ., ದಿನೇ ದಿನೇ ಪೊಲೀಸರು ಹೆಚ್ಚು ಸೋಂಕಿತರಾಗುತ್ತಿದ್ದಾರೆ. ಅವರ ಆರೋಗ್ಯ ಕಾಪಾಡುವುದು ನಮ್ಮ ಜವಾಬ್ದಾರಿ. ಹೀಗಾಗಿ ಅವರಿಗೆ ಪ್ರತ್ಯೇಕವಾದ ಕೋವಿಡ್ ಕೇರ್ ಸೆಂಟರ್ ನಿರ್ಮಾಣ ಮಾಡಿ, ಬೇಗ ಚಿಕಿತ್ಸೆ ನೀಡಿ ಮತ್ತೆ ಅವರನ್ನು ಕೆಲಸಕ್ಕೆ ಹಾಜರಾಗುವಂತೆ ಮಾಡಲಾಗುವುದು ಎಂದಿದ್ದಾರೆ.
Advertisement
ಜಿಲ್ಲೆಯಲ್ಲಿ ಇದುವರೆಗೂ ಕೊರೊನಾ ಸೋಂಕಿನಿಂದ ನಾಲ್ವರು ಪೊಲೀಸ್ ಇಲಾಖೆ ಸಿಬ್ಬಂದಿ ತಮ್ಮ ಪ್ರಾಣ ನೀಡಿದ್ದಾರೆ. ಅವರಿಗೆ ಸರ್ಕಾರ ಹಾಗೂ ಇಲಾಖೆಯಿಂದ ಸಿಗಬೇಕಾದ ಗೌರವ ನೀಡಲಾಗಿದೆ ಎಂದು ತಿಳಿಸಿದ್ದಾರೆ.
Advertisement