ಮಡಿಕೇರಿ: ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೊರೊನಾ ಕಫ್ರ್ಯೂ ಜಾರಿಗೊಳಿಸಿ ನಾಲ್ಕು ದಿನ ಕಳೆಯುತ್ತಿದೆ. ಈ ನಿಟ್ಟಿನಲ್ಲಿ ಹಗಲು ರಾತ್ರಿ ಎನ್ನದೆ ಕರ್ತವ್ಯ ಮಾಡುತ್ತಿರುವ ಪೊಲೀಸರು. ಸುಡು ಬಿಸಿಲಿನಲ್ಲಿ ಕರ್ತವ್ಯ ನಿರ್ವಹಿಸುತಿರುವುದು ಸಾಮಾನ್ಯವಾಗಿ ಕಂಡು ಬರುತ್ತಿದೆ. ಹೀಗಾಗಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಸಿಬ್ಬಂದಿಗೆ ಹಣ್ಣು ಹಾಗೂ ತಂಪು ಪಾನೀಯ ವಿತರಿಸಿದ್ದಾರೆ.
Advertisement
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಂಕಿತ್ ಪೊನ್ನಪ್ಪ ನೇತೃತ್ವದಲ್ಲಿ ಇಂದು ಪೊಲೀಸರಿಗೆ ಹಣ್ಣು ಮತ್ತು ತಂಪು ಪಾನೀಯಗಳನ್ನು ವಿತರಿಸಲಾಯಿತು. ಕೊರೊನಾ ಮಹಾಮಾರಿ ತಡೆಗಟ್ಟಲು ಹಗಲು ರಾತ್ರಿ ಸಾರ್ವಜನಿಕರಿಗಾಗಿ ಕೆಲಸ ಮಾಡುವ ಪೊಲೀಸ್ ಇಲಾಖೆಯ ಕಾರ್ಯವನ್ನು ಮನಗಂಡು ತಿತಿಮತಿ ಗಡಿಬಾಗದಿಂದ ಗೋಣಿಕೊಪ್ಪಲು ನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲ ಪೊಲೀಸ್ ಸಿಬ್ಬಂದಿಗೆ ಹಣ್ಣು ಹಾಗೂ ತಂಪು ಪಾನೀಯಗಳ ಕಿಟ್ ವಿತರಿಸಿದರು.
Advertisement
Advertisement
ಕಫ್ರ್ಯೂ ಹಿನ್ನೆಲೆಯಲ್ಲಿ ಪೊಲೀಸರಿಗೆ ಸರಿಯಾದ ಸಮಯಕ್ಕೆ ಊಟ, ಕಾಫಿ, ತಂಪು ಪಾನಿಯಗಳು ಸಿಗುತ್ತಿಲ್ಲ. ಸದಾ ಸಾರ್ವಜನಿಕರಿಗಾಗಿ ದುಡಿಯುವ ಪೊಲೀಸರ ಕಷ್ಟವನ್ನರಿತ ಯುವ ಕಾಂಗ್ರೆಸ್ ಕಾರ್ಯಕರ್ತರು ಹಣ್ಣು ಹಾಗೂ ತಂಪು ಪಾನೀಯ ವಿತರಿಸಿದ್ದಾರೆ.