ಬೆಳಗಾವಿ: ರಾಯಣ್ಣ ಪುತ್ಥಳಿ ಗಲಾಟೆಗೆ ಸಂಬಂಧಿಸಿದಂತೆ ಮೂರು ಪ್ರಕರಣ ದಾಖಲಾಗಿದೆ. ಈ ಪ್ರಕರಣ ವಾಪಸ್ ಪಡೆಯುವ ಬಗ್ಗೆ ಗೃಹ ಸಚಿವರ ಜೊತೆಗೆ ಚರ್ಚೆ ನಡೆಸಿದ್ದೇನೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕು ದಿನದ ಹಿಂದೆ ಬೆಳಗಾವಿಗೆ ಭೇಟಿ ನೀಡಲು ತೀರ್ಮಾನ ಮಾಡಿದ್ದೆ. ಇಷ್ಟು ಸುಲಭವಾಗಿ ಮೂರ್ತಿ ವಿವಾದ ಇತ್ಯರ್ಥ ಆಗುತ್ತದೆ ಎಂದು ಗೊತ್ತಿರಲಿಲ್ಲ. ಶಿವಾಜಿ, ರಾಯಣ್ಣ ಮೂರ್ತಿ ವಿವಾದ ಇತ್ಯರ್ಥವಾಗಿದೆ ಎಂದರು.
Advertisement
Advertisement
ದೇಶದ ಸ್ವಾತಂತ್ರ್ಯಕ್ಕಾಗಿ ಇಬ್ಬರ ಹೋರಾಟ ಸ್ಮರಣೀಯವಾಗಿದೆ. ಕೆಲ ಸಂಕುಚಿತ ಭಾವನೆ ಬೇರೆ ಬೇರೆ ಉಂಟಾಗಿತ್ತು. ನಿನ್ನೆ ಆಗಿರೋ ತೀರ್ಮಾನ ರಾಷ್ಟ್ರ ಭಕ್ತರಿಗೆ ಸಂತೋಷ ತಂದಿದೆ. ರಾಯಣ್ಣ, ಶಿವಾಜಿ ಇಬ್ಬರು ಜಾತಿ, ಭಾಷೆಯನ್ನು ಮೀರಿದ್ದಾರೆ. ಬೆಳಗಾವಿಯಲ್ಲಿ ಆಗಿರೋ ತೀರ್ಮಾನ ದೇಶಕ್ಕೆ ಮಾದರಿ. ತೀರ್ಮಾನದಿಂದ ಎಲ್ಲರಿಗೂ ಸಂತೋಷ ಆಗಿದೆ. ಇದು ಮಾದರಿ ತೀರ್ಮಾನ ಎಂದು ತಿಳಿಸಿದರು.
Advertisement
Advertisement
ಗಲಾಟೆ ಸಂಬಂಧ ಮೂರು ಪ್ರಕರಣ ದಾಖಲಾಗಿದೆ. ಈ ಬಗ್ಗೆ ಗೃಹ ಸಚಿವರ ಜತೆಗೆ ಚರ್ಚೆ ಮಾಡಿದ್ದೇನೆ. ಪ್ರಕರಣ ವಾಪಸ್ ಪಡೆಯುವ ಬಗ್ಗೆ ಮಾತಕತೆ ಮಾಡಿದ್ದೇನೆ. ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಗೆ ಅಭಿನಂದನೆ ಸಲ್ಲಿಸಬೇಕು. ರಾಯಣ್ಣ ಪ್ರತಿಮೆ ಸಂಬಂಧ ಅನೇಕರು ಹೋರಾಟ ಮಾಡಿದ್ರು ಎಂದು ಹೇಳಿದರು.