ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಪಿಯುಸಿ ಪೂರಕ ಪರೀಕ್ಷಾ ದಿನಾಂಕವನ್ನು ಪ್ರಕಟ ಮಾಡಿ ಪಿಯುಸಿ ಬೋರ್ಡ್ ಆದೇಶ ಹೊರಡಿಸಿದೆ.
ಜುಲೈ 16 ರಿಂದ 27ರ ಒಳಗೆ ಪರೀಕ್ಷೆ ಮುಗಿಸಲು ಪಿಯುಸಿ ಬೋರ್ಡ್ ಸೂಚನೆ ನೀಡಿದೆ. ಜಿಲ್ಲಾ ಮಟ್ಟ ಮತ್ತು ತಾಲೂಕು ಮಟ್ಟದಲ್ಲಿ ಆಯಾ ಕಾಲೇಜುಗಳಲ್ಲಿ ಪರೀಕ್ಷೆ ನಡೆಸಲು ಅನುಮತಿ ನೀಡಲಾಗಿದೆ. ಜೊತೆಗೆ ಕಾಲೇಜುಗಳು ಅಗತ್ಯ ವೇಳಾಪಟ್ಟಿ ರಚನೆ ಮಾಡಿಕೊಂಡು ಪೂರಕ ಪರೀಕ್ಷೆ ನಡೆಸಬೇಕಾಗಿದೆ. ಹೀಗಾಗಿ ಪಿಯುಸಿ ಬೋರ್ಡ್ ಘೋಷಣೆ ಮಾಡಿದ ದಿನಾಂಕದ ಒಳಗೆ ಪರೀಕ್ಷೆ ಮುಗಿಸಬೇಕು.
Advertisement
Advertisement
ಕೊರೊನಾ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವಹಿಸಿ ಪರೀಕ್ಷೆ ನಡೆಸಲು ಪಿಯುಸಿ ಬೋರ್ಡ್ ಸೂಚನೆ ನೀಡಿದೆ.
* ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು
* ಕಡ್ಡಾಯವಾಗಿ ಪರೀಕ್ಷೆ ಮುಗಿದ ನಂತರ ಕೇಂದ್ರದ ಕೊಠಡಿಗೆ ಸ್ಯಾನಿಟೈಸ್ ಮಾಡಿಸಬೇಕು
* ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯವಾಗಿ ಮಾಡಬೇಕು
* ವಿದ್ಯಾರ್ಥಿಗಳು ಕೂಡ ಮಾಸ್ಕ್ ಧರಿಸಿ ಪರೀಕ್ಷೆಗೆ ಹಾಜರಾಗಬೇಕು
* ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಸ್ಯಾನಿಟೈಸ್ ಬಳಸಬೇಕು
* ಪರೀಕ್ಷಾ ಕೇಂದ್ರದಲ್ಲಿ ಗುಂಪು ಸೇರದಂತೆ ಅಗತ್ಯ ಕ್ರಮವಹಿಸಬೇಕು
* ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಾಕ್ಸ್ ಗಳ ವ್ಯವಸ್ಥೆ ಮಾಡಬೇಕು
* ಪೋಷಕರು ಪರೀಕ್ಷಾ ಕೇಂದ್ರದ ಬಳಿ ಸೇರದಂತೆ ಮುಂಜಾಗ್ರತಾ ಕ್ರಮವಹಿಸಬೇಕು
Advertisement
Advertisement
ಹೀಗೆ ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡ ಜುಲೈ 27ರ ಒಳಗೆ ಪ್ರಥಮ ಪಿಯುಸಿ ಪೂರಕ ಪರೀಕ್ಷೆ ಮುಗಿಸಿರಬೇಕು ಎಂದು ಪಿಯುಸಿ ಬೋರ್ಡ್ ಘೋಷಣೆ ತಿಳಿಸಿದೆ. ವಿದ್ಯಾರ್ಥಿಗಳಿಗೆ ಮಾತ್ರವಲ್ಲದೇ ಪರೀಕ್ಷಾ ಸಿಬ್ಬಂದಿ ಕೂಡ ಅಗತ್ಯ ಮುಂಜಾಗ್ರತಾ ಕ್ರಮವಹಿಸಬೇಕಾಗಿದೆ.
ಇನ್ನೂ ಕಂಟೈನ್ಮೆಂಟ್ ಝೋನ್ನಿಂದ ಬರುವವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಕೊಡಬೇಕು. ಬೇರೆ ಕಾಯಿಲೆ ಇರುವವರಿಗೂ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಬೇಕು. ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಪರೀಕ್ಷೆ ನಡೆಸಬೇಕು ಎಂದು ಪಿಯುಸಿ ಬೋರ್ಡ್ ಆದೇಶ ಹೊರಡಿಸಿದೆ.