ಬೆಂಗಳೂರು: ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು ಮುಖ್ಯಮಂತ್ರಿ ಭೇಟಿ ಕೊಡಲಿದ್ದಾರೆ. ವೈಮಾನಿಕ ಸಮೀಕ್ಷೆ ನಡೆಸುವ ಮೂಲಕ ಪರಿಸ್ಥಿತಿ ಪರಿಶೀಲನೆ ನಡೆಸಲಿದ್ದಾರೆ.
ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ, ಗದಗ ಜಿಲ್ಲೆಗಳಲ್ಲಿ ಮುಖ್ಯಮಂತ್ರಿಗಳು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಎಚ್ಎಎಲ್ ವಿಮಾನ ನಿಲ್ದಾಣದಿಂದ ತೆರಳಲಿದ್ದು, 10.15ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣ ತಲುಪಲಿದ್ದಾರೆ. 10.30ಕ್ಕೆ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಸಚಿವರು, ಶಾಸಕರು, ಅಧಿಕಾರಿಗಳೊಂದಿಗೆ ಮಳೆ ಹಾನಿ ಕುರಿತಂತೆ ಚರ್ಚೆ ನಡೆಸಲಿದ್ದು, 11.15ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಆಲಮಟ್ಟಿ ಜಲಾಶಯಕ್ಕೆ ಮಧ್ಯಾಹ್ನ 12.20ಕ್ಕೆ ಭೇಟಿ ನೀಡಲಿರುವ ಸಿಎಂ, ಮಧ್ಯಾಹ್ನ 1 ಗಂಟೆಗೆ ಮಳೆ ಹಾನಿ ಕುರಿತು ಸಭೆ ನಡೆಸಲಿದ್ದಾರೆ.
Advertisement
Advertisement
ಸಿಎಂ ಭೇಟಿ ನೀಡುತ್ತಿರೋ ಹೊತ್ತಲ್ಲೇ ನೆರೆ ಪರಿಹಾರಕ್ಕೆ ಆಗ್ರಹಿಸಿ ಬೆಳಗಾವಿಯ ರಾಮದುರ್ಗ ತಾಲೂಕಿನ ಹಂಪಿಹೊಳೆ, ಅವರಾದಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. 2019ರಲ್ಲಿ ಉಂಟಾದ ಪ್ರವಾಹದಲ್ಲಿ ಮನೆ ಕಳೆದುಕೊಂಡಿದ್ದೇವು. 1 ವರ್ಷ ಹೋರಾಟ ಮಾಡುತ್ತಿದ್ದರೂ ಯಾರು ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿ 2 ಗ್ರಾಮದ ಗ್ರಾಮಸ್ಥರು ರಾಮದುರ್ಗ ಮಿನಿ ವಿಧಾನಸೌಧದ ಮುಂದೆ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.
Advertisement
Advertisement
ಸಿಎಂ ಭೇಟಿ ಹಿನ್ನೆಲೆಯಲ್ಲಿ ಆಲಮಟಿಗೆ ಇಂದು ಸಾರ್ವಜನಿಕರ ಪ್ರವೇಶವನು ನಿರ್ಬಂಧಿಸಲಾಗಿದೆ. ಸಿಎಂ ಅವರೊಂದಿಗೆ ತೀರ ಹತ್ತಿರದಲ್ಲಿರಬೇಕಾದರಬೇಕಾದ ಅಧಿಕಾರಿಗಳ ಕೋವಿಡ್ ಆರೋಗ್ಯ ಪರೀಕ್ಷೆ ನಡೆಸಲಾಗಿದೆ ಎಂಬ ಮಾಹಿತಿ ಲಭಿಸಿದೆ. ಪ್ರತಿಯೊಬ್ಬರ ಥರ್ಮಲ್ ಸ್ಕ್ರೀನಿಂಗ್, ಪಲ್ಸ್ ಆಕ್ಸಿಮೀಟರ್ ನಿಂದಲೂ ಪರೀಕ್ಷೆ ನಡೆಸುವುದು ಕಡ್ಡಾಯವಾಗಿದೆ. ಇದನ್ನೂ ಓದಿ: ಪ್ರವಾಹಕ್ಕೆ ಕೊಚ್ಚಿ ಹೋದ ರೈತರ ಬದುಕು- ನೆಲ ಕಚ್ಚಿದ ಬೆಳೆ ಕಣ್ಣಲ್ಲಿ ನೀರು ತರಿಸುತ್ತೆ