ಚಾಮರಾಜನಗರ: ಜಿಲ್ಲೆಯ ಪ್ರೇಕ್ಷಣೀಯ ತಾಣಗಳಿಗೆ ಸಾರ್ವಜನಿಕರ ಹಾಗೂ ಪ್ರವಾಸಿಗರ ಪ್ರವೇಶಕ್ಕೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಆದೇಶ ಹೊರಡಿಸಿದ್ದಾರೆ.
ಕೊರೊನಾ ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಜುಲೈ 2ರಿಂದ ಜಿಲ್ಲೆಯ ಪ್ರವಾಸಿತಾಣಗಳು ಮತ್ತು ಈ ವ್ಯಾಪ್ತಿಯ ಹೊಟೇಲ್, ರೆಸಾರ್ಟ್ ಹಾಗೂ ಹೋಂಸ್ಟೇಗಳನ್ನು ಮುಚ್ಚುವಂತೆ ಆದೇಶಿಸಲಾಗಿತ್ತು. ಇದೀಗ ಆರ್ಥಿಕ ಚಟುವಟಿಕೆಗಳಿಗೆ ಪುನಶ್ಚೇತನ ಕೊಡುವ ನಿಟ್ಟಿನಲ್ಲಿ ನಿಷೇಧ ತೆರವುಗೊಳಿಸಲಾಗಿದೆ. ಆದರೆ ಜಿಲ್ಲೆಯಾದ್ಯಂತ ಆಗಸ್ಟ್ 2ವರೆಗೆ ಎಲ್ಲಾ ಭಾನವಾರುಗಳು ಸಂಪೂರ್ಣ ಲಾಕ್ ಡೌನ್ ಮುಂದುರಿಯಲಿದೆ ಎಂದು ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
Advertisement
Advertisement
ಇನ್ನೊಂದೆಡೆ ಜಿಲ್ಲೆಯ ವಿವಿಧೆಡೆ ಸ್ಥಾಪಿಸಲಾಗಿದ್ದ ಆರು ಅಂತರ್ ಜಿಲ್ಲಾ ಚೆಕ್ಪೋಸ್ಟ್ ಗಳನ್ನು ಸಹ ತೆರವುಗೊಳಿಸಲಾಗಿದೆ. ಕೊರೊನಾ ಹರಡುವುದುನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದತೆ ಹೊರ ಜಿಲ್ಲೆಗಳಿಂದ ಬರುವವರ ಮಾಹಿತಿ ಸಂಗ್ರಹಣೆ ಹಾಗೂ ತಪಾಸಣೆಗಾಗಿ ಈ ಚೆಕ್ ಪೋಸ್ಟ್ ಗಳನ್ನು ತೆರೆಯಾಲಾಗಿತ್ತು. ಇದೀಗ ಚೆಕ್ ಪೋಸ್ಟ್ ಗಳನ್ನು ಜಿಲ್ಲಾಡಳಿತ ತೆರವುಗೊಳಿಸಿದೆ.
Advertisement