ಹಾಸನ: ಶಾಲೆಗಳ ಆರಂಭಕ್ಕೂ ಮುನ್ನ ಫೀಸ್ ಕಟ್ಟುವಂತೆ ಶಾಲೆಯವರು ಒತ್ತಾಯ ಮಾಡಿದರೆ ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಮುಂದಿನ ಎರಡು ವರ್ಷ ನಾನೇ ಸಿಎಂ: ಯಡಿಯೂರಪ್ಪ
Advertisement
ಹಾಸನದ ಜಿ.ಪಂ. ಹೊಯ್ಸಳ ಸಭಾಂಗಣದಲ್ಲಿ ಕೋವಿಡ್-19 ಹಾಗೂ ಇತರೆ ಅಭಿವೃದ್ಧಿ ವಿಷಯಗಳು ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರಿಶೀಲನಾ ಸಭೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನದಲ್ಲಿ ಇಂದು ಮೊದಲ ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದೇನೆ. ನಾಳೆ ಶಿವಮೊಗ್ಗದಲ್ಲಿ ಸಭೆ ನಡೆಸುತ್ತೇನೆ. ಜಿಲ್ಲೆಯ ಶಾಸಕರು ಅನೇಕ ವಿಷಯಗಳು ಬಗ್ಗೆ ಚರ್ಚಿಸಿದ್ದಾರೆ, ಸಲಹೆ ಕೊಟ್ಟಿದ್ದಾರೆ. ಶಾಲೆಗಳ ಆರಂಭಕ್ಕೂ ಮುನ್ನ ಫೀಸ್ ಕಟ್ಟುವಂತೆ ಯಾವ ಖಾಸಗಿ ಶಾಲೆಯವರು ಒತ್ತಾಯ ಮಾಡಬಾರದು. ಫೀಸ್ ಕಟ್ಟುವಂತೆ ಒತ್ತಾಯ ಮಾಡುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕೊರೊನಾ 3ನೇ ಅಲೆ ಎದುರಿಸಲು ಸರ್ಕಾರದಿಂದ ಸಂಪೂರ್ಣ ಸಿದ್ದತೆ : ಸಚಿವೆ ಶಶಿಕಲಾ ಜೊಲ್ಲೆ
Advertisement
Advertisement
ಹಾಸನ ನಗರದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಆರಂಭ ಮಾಡುವ ಕುರಿತು ದೇವೇಗೌಡರ ಜೊತೆ ನಾಳೆ ಮಾತನಾಡುತ್ತೇನೆ. ಅವರು ಯಾರಿಗೆ ಕೆಲಸ ಕೊಡಬೇಕೆಂದು ಹೇಳುತ್ತಾರೋ ಅವರಿಗೆ ಕೊಡುತ್ತೇನೆ. ಇದಕ್ಕೆ ಹಣದ ಕೊರತೆಯಿಲ್ಲ. ಕೊರೊನಾದಿಂದ ಎತ್ತಿನಹೊಳೆ ಕಾಮಗಾರಿ ಯೋಜನೆ ವಿಳಂಬವಾಗಿತ್ತು, ಶೀಘ್ರದಲ್ಲಿಯೇ ಯೋಜನೆ ಪೂರ್ಣಗೊಳಿಸಲಾಗುವುದು. ಕಲೇಶಪುರದಲ್ಲಿ ಕಾಡಾನೆ ಹಾವಳಿ ತಡೆಗಟ್ಟಲು ಮಡಿಕೇರಿ ಭಾಗದಲ್ಲಿ ಶಾಶ್ವತ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡುವಂತೆ ಶಾಸಕರು ಒತ್ತಾಯಿಸಿದ್ದಾರೆ. ಹಣಕಾಸಿನ ಇತಿಮಿತಿಯಲ್ಲಿ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುವುದು ಎಂದರು. ಇದನ್ನೂ ಓದಿ: ಸೋಮವಾರದಿಂದ ಲಾಕ್ ಓಪನ್ – ನೈಟ್, ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ಆದೇಶ
Advertisement
ಮೂರನೇ ಅಲೆ ತಡೆಗಟ್ಟಲು ವ್ಯಾಕ್ಸಿನೇಷನ್ ದೊಡ್ಡ ಪ್ರಮಾಣದಲ್ಲಿ ಬೇಕು ಎಂದು ಶಾಸಕರೆಲ್ಲರೂ ಕೇಳಿದ್ದಾರೆ. ಸುಧಾಕರ್ ಅವರ ಗಮನಕ್ಕೂ ಬಂದಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ. ಸಭೆಯಲ್ಲಿ ಆರೋಗ್ಯ ಸಚಿವ ಕೆ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಸಂಸದ ಪ್ರಜ್ವಲ್ ರೇವಣ್ಣ, ಶಾಸಕರುಗಳಾದ ಎಚ್.ಡಿ.ರೇವಣ್ಣ, ಎಚ್.ಕೆ.ಕುಮಾರಸ್ವಾಮಿ, ಕೆ.ಎಸ್.ಲಿಂಗೇಶ್, ಎ.ಟಿ.ರಾಮಸ್ವಾಮಿ, ಪ್ರೀತಂಗೌಡ, ಸಿ.ಎನ್.ಬಾಲಕೃಷ್ಣ, ಕೆ.ಎಂ.ಶಿವಲಿಂಗೇಗೌಡ, ಎಂಎಲ್ಸಿ ಎಂ.ಎ.ಗೋಪಾಲಸ್ವಾಮಿ, ಡಿಸಿ, ಎಸ್ಪಿ, ಡಿಎಸ್ಪಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.