ಬಳ್ಳಾರಿ: ಎಸ್ಎಸ್ಎಲ್ಸಿ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢವಾಗಿದ್ದು, ಆತನ ಜೊತೆಗೆ ಪರೀಕ್ಷೆ ಬರೆದ ಮಕ್ಕಳಲ್ಲಿ ಆತಂಕ ಹೆಚ್ಚಾಗಿದೆ.
ಜೂನ್ 25 ರಂದು ಪರೀಕ್ಷೆ ಬರೆದು ಬೈಕಿನಲ್ಲಿ ವಿದ್ಯಾರ್ಥಿಗಳು ತೆರಳುವಾಗ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಬ್ಬರಲ್ಲಿ ಒಬ್ಬನಿಗೆ ಸೋಂಕು ತಗುಲಿರೋದು ದೃಢವಾಗಿದೆ. ಕೊರೊನಾ ಸೋಂಕಿತ ವಿದ್ಯಾರ್ಥಿಯನ್ನು ಬಳ್ಳಾರಿ ತಾಲೂಕಿನ ಕಪಗಲ್ ಗ್ರಾಮದವನು ಎಂದು ತಿಳಿದು ಬಂದಿದೆ.
Advertisement
Advertisement
ಕೊರೊನಾ ಸೋಂಕಿತ ವಿದ್ಯಾರ್ಥಿಯನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಾಸನ, ಗದಗ ಮತ್ತು ಉಡುಪಿಯ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ತಗುಲಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.