ಬಳ್ಳಾರಿ: ಜಿಲ್ಲೆಯಲ್ಲಿ ಸದ್ಯಕ್ಕೆ ನೋ ಲಾಕ್ಡೌನ್. ಲಾಕ್ಡೌನ್ ವಿಧಿಸಲಾಗಿರುವ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿನ ಹರಡುವಿಕೆಯ ಪ್ರಮಾಣದಲ್ಲಿ ಆಗುವ ಬದಲಾವಣೆಗಳನ್ನು ಪರಿಶೀಲಿಸಲಾಗುತ್ತದೆ. ನಂತರ ನಮ್ಮಲ್ಲಿ ಅದನ್ನು ಜಾರಿಗೆ ತರಬೇಕೇ, ಬೇಡ್ವೆ ಎಂಬುದನ್ನು ಇನ್ನೊಂದು ವಾರ ಕಾದು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್ ಆನಂದ್ ಸಿಂಗ್ ಹೇಳಿದ್ದಾರೆ.
Advertisement
ಬಳ್ಳಾರಿಯ ಜಿಪಂ ಸಭಾಂಗಣದಲ್ಲಿ ಜಿಲ್ಲೆಯ ಕೊರೊನಾ ಸ್ಥಿತಿಗತಿ ಮತ್ತು ಸೋಂಕು ಹರಡುವಿಕೆಗೆ ಸಂಬಂಧಿಸಿದಂತೆ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಅವರು, ಬೇರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಬಳ್ಳಾರಿ ಜಿಲ್ಲೆಯಲ್ಲಿ ಇನ್ನೂ 15 ದಿನಗಳ ಕಾಲ ಕೊರೊನಾ ಸೋಂಕಿತರ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂದರು.
Advertisement
Advertisement
ಲಾಕ್ಡೌನ್ ವಿಧಿಸಿದ ಸಂದರ್ಭದಲ್ಲಿ ಜನರು ಅನುಭವಿಸಿದ ಪಾಡು ದೇವರೇ ಬಲ್ಲ ಎಂಬಂತಾಗಿತ್ತು. ಮತ್ತೆ ಪ್ರತಿನಿತ್ಯ ದುಡಿದು ತಮ್ಮ ಜೀವನ ನಡೆಸುವ ಜನರನ್ನು ಕಷ್ಟಕ್ಕೆ ತಳ್ಳಬಾರದು ಎಂಬ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
Advertisement