ನವದೆಹಲಿ: ಆತ್ಮಹತ್ಯೆಗೆ ಯತ್ನಿಸಿದ್ದ ಬಾಬಾ ಕಾ ಡಾಬಾ ಖ್ಯಾತಿಯ ಕಾಂತಾ ಪ್ರಸಾದ್ ಗುಣಮುಖರಾಗಿ ಮನೆಗೆ ಹಿಂದಿರುಗಿದ್ದಾರೆ. ಮನೆಗೆ ಬಂದ ಕಾಂತಾ ಪ್ರಸಾದ್, ತಾವು ಆತ್ಮಹತ್ಯೆ ನಿರ್ಧಾರ ತೆಗೆದುಕೊಂಡಿದ್ಯಾಕೆ ಎಂಬುದರ ಬಗ್ಗೆ ಹೇಳುವ ಮೂಲಕ ಎಲ್ಲ ಅಂತೆಕಂತೆಗಳಿಗೆ ತೆರೆ ಎಳೆದಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ್ದ ಕಾಂತಾ ಪ್ರಸಾದ್ ಅವರನ್ನು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
Advertisement
ಕಾಂತಾ ಪ್ರಸಾದ್ ಹೇಳಿದ್ದೇನು?:
ಕೆಲ ಯುಟ್ಯೂಬರ್ ಗಳು ಪದೇ ಪದೇ ತೊಂದರೆ ನೀಡುತ್ತಿದ್ದರು. ಇದರಿಂದ ನಾನು ಮಾನಸಿಕ ಖಿನ್ನತೆಗೆ ಒಳಗಾಗಿದ್ದೆ. ಪದೇ ಪದೇ ಯುಟ್ಯೂಬರ್ ಗೌರವ್ ವಾಸನ್ ಬಳಿ ಕ್ಷಮೆ ಕೇಳುವಂತೆ ಒತ್ತಡ ಹಾಕಲಾಗುತ್ತಿತ್ತು ಎಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.
Advertisement
Advertisement
ಈ ಸಂಬಂಧ ಪೊಲೀಸರು ಇದುವರೆಗೂ ಯಾವುದೇ ಎಫ್ಐಆರ್ ದಾಖಲಿಸಿಕೊಂಡಿಲ್ಲ. ಕಾಂತಾ ಪ್ರಸಾದ್ ಮೇಲೆ ಒತ್ತಡ ಹಾಕುತ್ತಿದ್ದ ಯುಟ್ಯೂಬರ್ ಗಳನ್ನು ಪತ್ತೆ ಹಚ್ಚಿ ಹೇಳಿಕೆ ದಾಖಲಿಸಿಕೊಳ್ಳಲು ಪೊಲೀಸರು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಹತ್ತು ದಿನಗಳಲ್ಲಿ ನನ್ನ ಮುಂದಿನ ರಾಜಕೀಯ ನಿರ್ಣಯ: ರಮೇಶ್ ಜಾರಕಿಹೊಳಿ
Advertisement
ಕಳೆದ ವರ್ಷ ಕಾಂತಾ ಪ್ರಸಾದ್ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಯುಟ್ಯೂಬರ್ ಗೌರವ್ ವಾಸನ್ ಈ ವೀಡಿಯೋ ಮಾಡಿ, ಕಾಂತಾ ಪ್ರಸಾದ್ ಗೆ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಇದಾದ ನಂತರ ಬಾಬಾ ಕಾ ಡಾಬಾ ಇಡೀ ದೇಶದಲ್ಲಿಯೇ ಫೇಮಸ್ ಆಗಿತ್ತು. ಹಲವರು ಕಾಂತಾ ಪ್ರಸಾದ್ಗೆ ಆರ್ಥಿಕ ಸಹಾಯ ಮಾಡಿದ್ದರು. ಆದ್ರೆ ಗೌರವ್ ವಾಸನ್ ಹಣಕಾಸಿನ ವಿಚಾರದಲ್ಲಿ ತಮಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಕಾಂತಾ ಪ್ರಸಾದ್ ದೂರು ಸಲ್ಲಿಸಿದ್ದರು. ಇದಾದ ಬಳಿಕ ಗೌರವ್ ವಾಸನ್ ಬಳಿ ಕಾಂತಾ ಪ್ರಸಾದ್ ಕ್ಷಮೆ ಕೇಳಿದ್ದರು. ಇದನ್ನೂ ಓದಿ: ನಿರಾಶ್ರಿತ ಮಹಿಳೆಗೆ ಕೋವಿಡ್ ಪಾಸಿಟಿವ್- ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಪೊಲೀಸರು, ವೈದ್ಯರು