– ಸಚಿವರು ತಮ್ಮ ಹಣದ ದೌರ್ಬಲ್ಯದ ಬಗ್ಗೆ ಏಕೆ ಮಾತಾಡಲ್ಲ?
ಮೈಸೂರು: ದುರ್ಬಲ ಮನಸ್ಸಿನ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಆತ್ಮಹತ್ಯೆಗೆ ಸರ್ಕಾರದ ರೈತ ನೀತಿಗಳು ಕಾರಣವಲ್ಲ ಎಂಬ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರ ಹೇಳಿಕೆಗೆ ಮಾಜಿ ಸಚಿವ ಸಾ.ರಾ. ಮಹೇಶ್ ಟ್ವಿಟ್ಟರ್ ನಲ್ಲಿ ತರಾಟೆ ತೆಗೆದುಕೊಂಡಿದ್ದಾರೆ.
ಕೃಷಿ ಇಲಾಖೆಯಲ್ಲಿ ವರ್ಗಾವಣೆ ಹೆಸರಿನಲ್ಲಿ ಸಚಿವರು, ಅಧಿಕಾರಿಗಳಿಂದ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಇಲಾಖೆ ಸಿಬ್ಬಂದಿಯೇ ಅವರಿಗೆ ಪತ್ರ ಬರೆದಿದ್ದಾರೆ. ಸಮಸ್ಯೆ ಸರಿಪಡಿಸದಿದ್ದರೆ ಸಾಮೂಹಿಕವಾಗಿ ದಯಾಮರಣಕ್ಕೆ ಅರ್ಜಿ ಸಲ್ಲಿಸುವುದಾಗಿ ಎಚ್ಚರಿಸಿದ್ದಾರೆ. ಈ ಭ್ರಷ್ಟಾಚಾರ ಆರೋಪ ಬಂದಿದ್ದು ಹೇಗೆ? ಇದು ಎಂಥ ದೌರ್ಬಲ್ಯ? ಎಂದು ಪ್ರಶ್ನಿಸಿದ್ದಾರೆ.
Advertisement
Advertisement
ಆತ್ಮಹತ್ಯೆ ಮಾಡಿಕೊಳ್ಳುವ ರೈತರು ದುರ್ಬಲ ಮನಸ್ಸಿನವರು ಎನ್ನುವ ಕೃಷಿ ಸಚಿವ ಬಿ.ಸಿ. ಪಾಟೀಲರು ತಮ್ಮ ಹಣದ ದೌರ್ಬಲ್ಯದ ಬಗ್ಗೆ ಏಕೆ ಮಾತಾಡುವುದಿಲ್ಲ? ರೈತನ ಸಂಕಷ್ಟದ ಪರಿಸ್ಥಿತಿಯನ್ನು ಗೇಲಿ ಮಾಡುವ ಬಿ.ಸಿ. ಪಾಟೀಲ್ ವರ್ತನೆಯೇ ದುರ್ಬಲ ಮನಸ್ಸಿನ ಪ್ರತೀಕ. ಅವರ ವರ್ತನೆ ಅಕ್ಷಮ್ಯ. ಕೈಲಾದರೆ ರೈತರಿಗೆ ಒಳ್ಳೆದು ಮಾಡಿ, ಹೀಗೆಲ್ಲ ಮಾತನಾಡಬೇಡಿ ಎಂದು ಹೇಳಿರೋ ಸಾರಾ ಮಹೇಶ್, ಬಿ.ಸಿ. ಪಾಟೀಲ್ ಮೊದಲು ರೈತರ ಕ್ಷಮೆ ಕೇಳಬೇಕು.
Advertisement
ಕೃಷಿ ಇಲಾಖೆಯಲ್ಲಿ ವರ್ಗಾವಣೆ ಹೆಸರಿನಲ್ಲಿ ಸಚಿವರು, ಅಧಿಕಾರಿಗಳಿಂದ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಇಲಾಖೆ ಸಿಬ್ಬಂದಿಯೇ @CMofKarnataka ಅವರಿಗೆ ಪತ್ರ ಬರೆದಿದ್ದಾರೆ. ಸಮಸ್ಯೆ ಸರಿಪಡಿಸದಿದ್ದರೆ ಸಾಮೂಹಿಕವಾಗಿ ದಯಾಮರಣಕ್ಕೆ ಅರ್ಜಿ ಸಲ್ಲಿಸುವುದಾಗಿ ಎಚ್ಚರಿಸಿದ್ದಾರೆ. ಈ ಭ್ರಷ್ಟಾಚಾರ ಆರೋಪ ಬಂದಿದ್ದು ಹೇಗೆ? ಇದು ಎಂಥ ದೌರ್ಬಲ್ಯ?
1/3 pic.twitter.com/EzLlJ8eTuI
— Sa Ra Mahesh (@SaRa_Mahesh_JDS) January 20, 2021
Advertisement
ಕೃಷಿ ಇಲಾಖೆಯ ಸಿಬ್ಬಂದಿಯೇ ಮಾಡಿರುವ ಲಂಚದ ಆರೋಪದ ಕುರಿತು ಸ್ಪಷ್ಟನೆ ನೀಡಬೇಕು. ಸರ್ಕಾರ ಈ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಬೇಕು. ಭ್ರಷ್ಟಾಚಾರ ಸಾಬೀತಾದರೆ ಬಿ.ಸಿ. ಪಾಟೀಲ್ ಅವರನ್ನು ಮುಲಾಜಿಲ್ಲದೇ ಮಂತ್ರಿಮಂಡಲದಿಂದ ಹೊರದಬ್ಬಬೇಕು ಎಂದು ಆಗ್ರಹಿಸಿದ್ದಾರೆ.
ಬಿ.ಸಿ. ಪಾಟೀಲ್ ಮೊದಲು ರೈತರ ಕ್ಷಮೆ ಕೇಳಬೇಕು. ಕೃಷಿ ಇಲಾಖೆಯ ಸಿಬ್ಬಂದಿಯೇ ಮಾಡಿರುವ ಲಂಚದ ಆರೋಪದ ಕುರಿತು ಸ್ಪಷ್ಟನೆ ನೀಡಬೇಕು. ಸರ್ಕಾರ ಈ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಬೇಕು. ಭ್ರಷ್ಟಾಚಾರ ಸಾಬೀತಾದರೆ ಬಿ.ಸಿ. ಪಾಟೀಲ್ ಅವರನ್ನು ಮುಲಾಜಿಲ್ಲದೇ ಮಂತ್ರಿಮಂಡಲದಿಂದ ಹೊರದಬ್ಬಬೇಕು ಎಂದು ಆಗ್ರಹಿಸುತ್ತೇನೆ. @AmitShah @PMOIndia
3/3
— Sa Ra Mahesh (@SaRa_Mahesh_JDS) January 20, 2021
ಬಿ.ಸಿ.ಪಾಟೀಲ್ ಹೇಳಿದ್ದೇನು?: ಯಾವುದೋ ಕಾರಣದಲ್ಲಿ ಯಾವುದೋ ಒಂದು ಟೈಂ ಅಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಅವರ ಆತ್ಮಹತ್ಯೆ ಆಗಬಾರದು ಅಂತಾನೆ ಹಲವು ಕಾರ್ಯಕ್ರಮ ಮಾಡುತ್ತಿದ್ದೇವೆ. ರೈತರು ಆತ್ಮಹತ್ಯೆ ಮಾಡಿಕೊಂಡ ತಕ್ಷಣ ಅವರ ಮನೆಗೆ ಹೋಗಿ ಹಾರ ಹಾಕಿದ್ರೆ. ಸಾಂತ್ವನ ಹೇಳಿದ್ರೆ ಆತ್ಮಹತ್ಯೆ ನಿಲ್ಲೋಲ್ಲ. ಅದಕ್ಕೆ ಪರ್ಯಾಯವಾಗಿ ಕಾರ್ಯಕ್ರಮ ರೂಪಿಸಬೇಕು ಎಂದರು.
https://www.youtube.com/watch?v=t5bVhqe8Kf0
ರೈತರ ಆತ್ಮಹತ್ಯೆಗೆ ಸರ್ಕಾರದ ನೀತಿಗಳು ಕಾರಣವಲ್ಲ. ವೀಕ್ ಮೈಂಡ್ ನಿಂದ ಕೆಲ ರೈತರು ಆತ್ಮಹತ್ಯೆ ಮಾಡಿಕೊಳ್ತಾರೆ. ಎಲ್ಲ ರೈತರು ಏನ್ ಆತ್ಮಹತ್ಯೆ ಮಾಡಿಕೊಂಡಿದ್ದಾರಾ? ಇಲ್ಲ ತಾನೆ. ರೈತರಷ್ಟೆ ಅಲ್ಲ ಬೇರೆ ಬೇರೆಯವರು ಆತ್ಮಹತ್ಯೆ ಮಾಡಿಕೊಳ್ತಾರೆ. ಉದ್ಯಮಿಗಳು, ಅಧಿಕಾರಿಗಳು ಹಾಗೂ ಇತರೇ ಕ್ಷೇತ್ರದ ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಸರ್ಕಾರದ ನೀತಿಗಳು ಕಾರಣವಲ್ಲ ಎಂದು ತಿಳಿಸಿದ್ದಾರೆ.