ಯಾದಗಿರಿ: ರಾಜ್ಯದಲ್ಲಿ ಸಿಎಂ ಆಗಿ ಬಿಎಸ್ವೈ ಅವರಿಗೆ ಆಡಳಿತ ನಡೆಸಲು ಆಗುತ್ತಿಲ್ಲ, ಅವರ ಬದಲಾಗಿ ಸಿಎಂ ಪುತ್ರ ಆಡಳಿತ ನಡೆಸುತ್ತಿದ್ದಾರೆ ಎಂದು ಆಡಳಿತ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ಶರಣಬಸಪ್ಪ ದರ್ಶನಾಪುರ ಕಿಡಿಕಾರಿದ್ದಾರೆ.
Advertisement
ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ದೋರನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬಿಎಸ್ವೈ ಅವರಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ,ಹೀಗಾಗಿ ರಾಜ್ಯದಲ್ಲಿ ಸಿಎಂ ಬದಲಾವಣೆ ಆದರೆ ರಾಜ್ಯಕ್ಕೆ ಉತ್ತಮವಾಗಿದೆ. ಬಿಜೆಪಿ ಪಕ್ಷ ಯಾರನ್ನು ಸಿಎಂ ಮಾಡುತ್ತಾರೆ? ಬಿಜೆಪಿ ಪಕ್ಷಕ್ಕೆ ಬಿಟ್ಟ ವಿಚಾರ ಸಿಗುತ್ತಿದೆ ಎಂದು ವ್ಯಂಗ್ಯ ಮಾಡಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಜಿಎಸ್ಟಿಗೆ ಸೇರಿಸಬೇಡಿ: ಕುಮಾರಸ್ವಾಮಿ
Advertisement
Advertisement
ಇಂಧನ ಬೆಲೆ ಜಾಸ್ತಿ ಆದಂತೆ ಎಲ್ಲಾ ಸರಕು ಮತ್ತು ಸೇವೆಗಳ ಬೆಲೆ ಜಾಸ್ತಿಯಾಗುತ್ತದೆ. ಹೀಗಾಗಿ ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ತರಬೇಕು ಎಂದು ಆಗ್ರಹಿಸಿದರು.
Advertisement